ಅಹಮದಾಬಾದ್(ಗುಜರಾತ್): ಸ್ಥಳೀಯರ ಭೇಟಿಗೆ ತೆರಳಿದ್ದ ದಲಿತ ಮುಖಂಡ, ಗುಜರಾತ್ ಕಾಂಗ್ರೆಸ್ ಪಕ್ಷದ ಶಾಸಕ ಜಿಗ್ನೇಶ್ ಮೇವಾನಿ ಮೇಲೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅಹಮದಾಬಾದ್ನ ವಸ್ಟ್ರಲ್ ಪ್ರದೇಶದಲ್ಲಿ ಸರ್ಕಾರಿ ವಸತಿ ಗೃಹ ನಿರ್ಮಿಸಲಾಗಿದೆ. ಇಲ್ಲಿ ಕಳೆದ ಕೆಲ ತಿಂಗಳಿಂದ ಅಕ್ರಮ ಚಟುವಟಿಕೆ ನಡೆಯುತ್ತಿದ್ದು, ಇದರಿಂದ ಜನರು ತೊಂದರೆಗೊಳಗಾಗಿದ್ದಾರೆಂಬ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ, ಸ್ಥಳೀಯರನ್ನು ಭೇಟಿ ಮಾಡುವ ಉದ್ದೇಶದಿಂದ ನಿನ್ನೆ ರಾತ್ರಿ ಜಿಗ್ನೇಶ್ ಮೇವಾನಿ ಆ ಪ್ರದೇಶಕ್ಕೆ ತೆರಳಿದ್ದರು. ಅಪಾರ್ಟ್ಮೆಂಟ್ನಲ್ಲಿ ವಾಸವಾಗಿರುವ 100ಕ್ಕೂ ಹೆಚ್ಚು ಕುಟುಂಬಸ್ಥರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಈ ವೇಳೆ ಅವರ ಮೇಲೆ ದಾಳಿ ನಡೆಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.