ಮುಂಬೈ: ಜೂನ್ 20ರಂದು ಎಂಎಲ್‌ಸಿ ಚುನಾವಣೆಗೆ ಮತದಾನ ಮಾಡಲು ಅನುಮತಿ ನೀಡುವಂತೆ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಮತ್ತು ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ. ಇವರಿಬ್ಬರಿಗೂ ಮತ ಚಲಾಯಿಸಲು ಅವಕಾಶ ನೀಡುವುದಿಲ್ಲ ಎಂದು ಕೋರ್ಟ್ ಹೇಳಿದೆ. ಈ ಮೂಲಕ ನ್ಯಾಯಾಲಯ ಅವರ ಮನವಿಯನ್ನು ತಿರಸ್ಕರಿಸಿದೆ.
ನವಾಬ್ ಮಲ್ಲಿಕ್, ಅನಿಲ್ ದೇಶಮುಖ್ಗೆ ಮತಚಲಾವಣೆಗೆ ಅವಕಾಶ ನಿರಾಕರಿಸಿದ ಹೈಕೋರ್ಟ್ - Bombay High Court dismisses the pleas of Maharashtra Minister Nawab Mallik and former Home Minister Anil Deshmukh
ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ಮತ್ತು ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರು ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ..
ನವಾಬ್ ಮಲ್ಲಿಕ್ ಮತ್ತು ಅನಿಲ್ ದೇಶಮುಖ್
ನವಾಬ್ ಮಲಿಕ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಫೆಬ್ರವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದರು. ಈ ಅಪರಾಧ ಪ್ರಕರಣದಲ್ಲಿ ರಾಜ್ಯದ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಕೂಡ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ: ಮದುವೆ ಆಗಿ ಒಂದೇ ತಿಂಗಳಿಗೆ ನಾಲ್ಕು ತಿಂಗಳ ಗರ್ಭಿಣಿಯಾದ ಯುವತಿ : ನವ ವಿವಾಹಿತನಿಗೆ ಶಾಕ್