ಫಿರೋಜ್‌ಪುರ(ಪಂಜಾಬ್) :ಫಿರೋಜ್‌ಪುರದ ಸೆಂಟ್ರಲ್ ಜೈಲ್ ನಲ್ಲಿರುವ ಪಂಜಾಬಿ ಗಾಯಕ ಮತ್ತು ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳು ಮೊಬೈಲ್ ಬಳಕೆ ಮಾಡುತ್ತಿದ್ದ ಬಗ್ಗೆ ತಿಳಿದು ಬಂದಿದೆ. ಗ್ಯಾಂಗ್‌ಸ್ಟರ್ ಮನ್‌ಪ್ರೀತ್ ಸಿಂಗ್‌ನಿಂದ ಸ್ಮಾರ್ಟ್‌ಫೋನ್ ಮತ್ತು ಸಿಮ್ ಕಾರ್ಡ್ ಜಪ್ತಿ ಮಾಡಲಾಗಿದೆ.
ಜೈಲ್ನಲ್ಲಿ ಮೊಬೈಲ್ ಬಳಕೆ ಮಾಡುತ್ತಿರುವ ಸಿಧು ಮೂಸೆವಾಲಾ ಹಂತಕ - ಮೂಸೆವಾಲಾ ಹತ್ಯೆ ಪ್ರಕರಣದ ಆರೋಪಿಗಳು
ಗಾಯಕ ಸಿಧು ಮೂಸೆವಾಲಾ ಹಂತಕ ಮನ್‌ಪ್ರೀತ್ ಸಿಂಗ್ ಇದ್ದ ಸೆಲ್ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜೈಲ್ನಲ್ಲಿ ಮೊಬೈಲ್ ಬಳಕೆ ಮಾಡುತ್ತಿರುವ ಸಿಧು ಮೂಸೆವಾಲ ಹಂತಕ
ಭದ್ರತೆಯ ದೃಷ್ಟಿಯಿಂದ ತನಿಖೆ ನಡೆಸಿದಾಗ ಸೆಲ್ ಒಳಗೆ ಮೊಬೈಲ್ ಫೋನ್ ಸಿಕ್ಕಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಮ್ ಮತ್ತು ಮೊಬೈಲ್ ಆರೋಪಿ ಹೇಗೆ ಸಿಕ್ಕಿತು, ಸಿಮ್ ಯಾರ ಹೆಸರಿನಲ್ಲಿದೆ ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಆರೋಪಿ ಜೈಲ್ನಿಂದ ಯಾರೊಂದಿಗೆ ಸಂಪರ್ಕದಲ್ಲಿದ್ದರಾ ಎಂಬುದರ ಬಗ್ಗೆಯೂ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಬೆಳ್ಳಂಬೆಳಗ್ಗೆ 60ಕ್ಕೂ ಹೆಚ್ಚು ಸ್ಥಳಗಳ ಮೇಲೆ NIA ದಾಳಿ