ನವದೆಹಲಿ: ಉತ್ತರ ದೆಹಲಿಯ ಮಲ್ಕಾಗಂಜ್ ಪ್ರದೇಶದಲ್ಲಿ ಬುಧವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ನಡೆದ ರೋಡ್ ಶೋ ವೇಳೆ ಎಎಪಿ ಶಾಸಕ ಅಖಿಲೇಶ್ ಪತಿ ತ್ರಿಪಾಠಿ ಸೇರಿದಂತೆ ಇನ್ನಿಬ್ಬರ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಎಂಎಲ್ಎ ಅಖಿಲೇಶ್ ಪತಿ ತ್ರಿಪಾಠಿ, ಆಪ್ ಶಾಸಕ ಸೋಮನಾಥ್ ಭಾರ್ತಿ ಅವರ ಕಾರ್ಯದರ್ಶಿ ಮತ್ತು ಗುಡ್ಡಿ ದೇವಿ ಎಂಬುವರು ತಮ್ಮ ಮೊಬೈಲ್ ಕಳ್ಳತನಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.