ನವದೆಹಲಿ:ಬಾಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಉಭಯ ರಾಷ್ಟ್ರಗಳ ಸಂಬಂಧಗಳ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನ ಸೇರಿದಂತೆ ಹಲವು ವಲಯಗಳ ಸಹಕಾರ ಕುರಿತು ಚರ್ಚೆ ನಡೆಸಲಾಗಿದೆ.
ಕ್ವಾಡ್ ಮತ್ತು I2U2 ನಂತಹ ಹೊಸ ಗುಂಪುಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಸಹಕಾರದ ಬಗ್ಗೆ ಅವರು ತೃಪ್ತಿ ವ್ಯಕ್ತಪಡಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ಜಾಗತಿಕ ಮತ್ತು ಪ್ರಾದೇಶಿಕ ಅಭಿವೃದ್ಧಿ ಬಗ್ಗೆ ಕೂಡ ಉಭಯ ರಾಷ್ಟ್ರ ನಾಯಕರು ಚರ್ಚೆ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕ ಸಹಭಾಗಿತ್ವವನ್ನು ಗಟ್ಟಿಗೊಳಿಸಲು ಬೆಂಬಲ ನೀಡಿದ್ದಲ್ಲೇ ಪ್ರಧಾನಿ ಮೋದಿ ಅವರು ಜೋ ಬೈಡನ್ಗೆ ಧನ್ಯವಾದ ತಿಳಿಸಿದ್ದಾರೆ.