ಕರ್ನಾಟಕ

karnataka

ETV Bharat / bharat

ಮೋದಿ ಸಂಪುಟಕ್ಕೆ ಮೇಜರ್​ ಸರ್ಜರಿ: ಸಚಿವ ಸ್ಥಾನಕ್ಕೆ ಡಿವಿಎಸ್​ ರಾಜೀನಾಮೆ.. ಶೋಭಾಗೆ ಮಣೆ? - ರಮೇಶ್​ ಪೋಖ್ರಿಯಲ್ ರಾಜೀನಾಮೆ

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹಾಗೂ ಕಾರ್ಮಿಕ ಸಚಿವ ಸಂತೋಷ್​ ಗಂಗ್ವಾರ್​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರನ್ನು ಸಂಪುಟದಿಂದ ಕೈಬಿಡಲಾಗಿದೆ. ಇದೇ ವೇಳೆ ಸಚಿವ ಡಿ ವಿ ಸದಾನಂದ ಗೌಡರನ್ನು ಕೈಬಿಟ್ಟು, ಶೋಭಾ ಕರಂದ್ಲಾಜೆಗೆ ಮಣೆ ಹಾಕಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

cabinet
ಕಾರ್ಮಿಕ ಸಚಿವ ಸಂತೋಷ್​ ಗಂಗ್ವಾರ್​

By

Published : Jul 7, 2021, 1:51 PM IST

Updated : Jul 7, 2021, 2:33 PM IST

ನವದೆಹಲಿ:2019 ರಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಕ್ಯಾಬಿನೆಟ್​​ ಪುನರಾಚನೆ ಆಗುತ್ತಿದೆ. ಇಂದು ಸಂಜೆ ಆರು ಗಂಟೆಗೆ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್​ ಆಗಿದೆ. ಕೇಂದ್ರ ಸಚಿವ ಸ್ಥಾನಕ್ಕೆ ಸದಾನಂದ ಗೌಡ ರಾಜೀನಾಮೆ ನೀಡಿದ್ದಾರೆ. ಈ ಸ್ಥಾನವನ್ನು ಸಂಸದೆ ಶೋಭಾ ಕರಂದ್ಲಾಜೆಗೆ ನೀಡಲಾಗ್ತಿದೆ ಎಂದು ಹೇಳಲಾಗ್ತಿದೆ.

ಮತ್ತೊಂದೆಡೆ ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹಾಗೂ ಕಾರ್ಮಿಕ ಸಚಿವ ಸಂತೋಷ್​ ಗಂಗ್ವಾರ್​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕ್ಯಾಬಿನೆಟ್ ಪುನರಾಚನೆಗೆ ಸ್ವಲ್ಪ ಮುಂಚಿತವಾಗಿ ಅವರನ್ನು ಅವರನ್ನು ಮೋದಿ ಸಂಪುಟದಿಂದ ಕೈಬಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಂತೋಷ್​ ಗಂಗ್ವಾರ್ ತಾವು ರಾಜೀನಾಮೆ ನೀಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಸಚಿವ ಸಂಪುಟ ​​ ಪುನಾರಚನೆ ಆಗುತ್ತಿದ್ದು, 34 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ ಎಂದು ತಿಳಿದುಬಂದಿದ್ದು, ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಮೋದಿ ಕ್ಯಾಬಿನೆಟ್​​ನಲ್ಲಿ ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಸಚಿವ ದೇಬಸ್ರೀ ಚೌಧುರಿ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ರಾಜ್ಯ ಸಚಿವರಾಗಿದ್ದು, ಪಶ್ಚಿಮ ಬಂಗಾಳದ ರಾಯಗಂಜ್ ಕ್ಷೇತ್ರದ ಲೋಕಸಭಾ ಸಂಸದರಾಗಿದ್ದಾರೆ.

Last Updated : Jul 7, 2021, 2:33 PM IST

ABOUT THE AUTHOR

...view details