ಚೆನ್ನೈ :ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ಮೋದಿ ಒಂದು ಕ್ಷಣ ಕಣ್ತುಂಬಿಕೊಂಡರು.
ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ವಿಮಾನದ ಮೂಲಕ ನಗರಕ್ಕೆ ಆಗಮಿಸುತ್ತಿದ್ದ ಪ್ರಧಾನಿ ಮೋದಿ, ಚೀಪಕ್ನ ಎಂಎ ಚಿದಂಬರ್ ಕ್ರೀಡಾಂಗಣ ಮೇಲೆ ಸಂಚರಿಸುವಾಗ ಕ್ರಿಕೆಟ್ ಪಂದ್ಯಾಟವನ್ನು ಕಣ್ತುಂಬಿಕೊಂಡಿದ್ದಾರೆ.
ಈ ಬಗ್ಗೆ ಸುಂದರವಾದ ಏರಿಯಲ್ ವೀವ್ ಫೋಟೋವೊಂದನ್ನು ಕೂಡ ಪ್ರಧಾನಿ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರಧಾನಿ ಟ್ವೀಟ್ನ ಬಿಸಿಸಿಐ ರೀ ಟ್ವೀಟ್ ಮಾಡಿದೆ.
ಭಾರತ ಮತ್ತು ಇಂಗ್ಲೆಂಡ್ ಪ್ರಸ್ತುತ ನಾಲ್ಕು ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದ್ದು, ಮೊದಲ ಎರಡು ಪಂದ್ಯಗಳು ಚೆನ್ನೈನಲ್ಲಿ ನಡೆಯುತ್ತಿದ್ದರೆ, ಉಳಿದ ಎರಡು ಪಂದ್ಯಗಳು ಅಹಮದಾಬಾದ್‌ನ ಸರ್ದಾರ್ ಪಟೇಲ್ ಕ್ರೀಡಾಂಗಣದಲ್ಲಿ ನಡೆಯಲಿವೆ.