ನವದೆಹಲಿ: ನೆರೆಯ ಪಾಕಿಸ್ತಾನದಲ್ಲಿ ಪ್ರಮುಖ ಬೆಳವಣಿಗೆಗಳ ನಂತರ ಹೊಸ ಪ್ರಧಾನಿ ಆಯ್ಕೆಯಾಗಿದ್ದಾರೆ. ಇಮ್ರಾನ್ ಖಾನ್ ಕುರ್ಚಿಯಿಂದ ಕೆಳಗಿಳಿದಿದ್ದು, ಆ ಸ್ಥಾನಕ್ಕೆ ಶೆಹಬಾಜ್ ಷರೀಫ್ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ್ದಾರೆ. ಶಾಂತಿ ಮತ್ತು ಸ್ಥಿರತೆಯನ್ನು ಭಾರತ ಬಯಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪಾಕ್ ನೂತನ ಪ್ರಧಾನಿಗೆ ಅಭಿನಂದಿಸಿದ ಪ್ರಧಾನಿ ಮೋದಿ - ಪಾಕ್ ಪ್ರಧಾನಿ ಶೆಹಬಾಜ್ ಷರೀಫ್
ಪಾಕಿಸ್ತಾನ ನೂತನ ಪ್ರಧಾನಿಯಾಗಿ ಆಯ್ಕೆಯಾದ ಶೆಹಬಾಜ್ ಷರೀಫ್ ಅವರಿಗೆ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಪಾಕ್ ನೂತನ ಪ್ರಧಾನಿಗೆ ಅಭಿನಂದಿಸಿದ ಪ್ರಧಾನಿ ಮೋದಿ
ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ ಹೆಚ್.ಇ. ಮಿಯಾನ್ ಮುಹಮ್ಮದ್ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು. ಭಾರತವು ಭಯೋತ್ಪಾದನೆ ಮುಕ್ತ, ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿಗೆ ಇರುವ ಸವಾಲುಗಳ ಮೇಲೆ ಗಮನ ಕೇಂದ್ರೀಕರಿಸಬಹುದು. ಇದರ ಜೊತೆಗೆ ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ರಷ್ಯಾದೊಂದಿಗಿನ ಶಸ್ತ್ರಾಸ್ತ್ರಗಳ ವಹಿವಾಟು ನಿಲ್ಲಿಸಲು ಎಲ್ಲಾ ರಾಷ್ಟ್ರಗಳಿಗೆ ಅಮೆರಿಕ ಕರೆ