ನವದೆಹಲಿ:ಕಳೆದ ಎಂಟು ವರ್ಷಗಳ ಅಧಿಕಾರಾವಧಿಯಲ್ಲಿ ಆರ್ಥಿಕ ಅಭಿವೃದ್ಧಿಯ ಗುರಿಗಳನ್ನು ಸಾಧಿಸುವಲ್ಲಿ ಮೋದಿ ವಿಫಲರಾಗಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಮೋದಿ ಆಡಳಿತದ ವಿರುದ್ಧ ಟ್ವೀಟ್ ಮಾಡಿರುವ ಅವರು ಆರ್ಥಿಕ ಬೆಳವಣಿಗೆ ದರ 2016ರಿಂದ ಸತತವಾಗಿ ಕುಸಿಯುತ್ತಿದೆ. ರಾಷ್ಟ್ರೀಯ ಭದ್ರತೆಯು ದುರ್ಬಲಗೊಂಡಿದೆ. ಭಾರತ-ಚೀನಾ ಸಂಬಂಧವನ್ನು ಮತ್ತೆ ಹಳಿಗೆ ತರಲು ಅವಕಾಶವಿದ್ದು, ಆ ಅವಕಾಶವನ್ನು ಮೋದಿ ನಿರ್ಲಕ್ಷಿಸಿದ್ದಾರೆ. ಆ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದು ಎಂಬುದು ಮೋದಿಗೆ ಗೊತ್ತಿದೆಯೇ ಎಂದು ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ಈ ಸಮಸ್ಯೆಗಳನ್ನು ಪರಿಹರಿಸಲು ನೀವು ಏನು ಸಲಹೆ ನೀಡುತ್ತೀರಿ ಎಂದು ಟ್ವೀಟ್ನಲ್ಲಿ ಒಬ್ಬರು ಕೇಳಿದ ಪ್ರಶ್ನೆಗೆ ಉತ್ತರ ನೀಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಾಚೀನ ಕಾಲದ ಋಷಿಗಳು ಜ್ಞಾನವನ್ನು ಹೊಂದಿರುವವರಿಗೆ ಜ್ಞಾನವನ್ನು ನೀಡಬೇಕು ಎಂದು ಸಲಹೆ ನೀಡುತ್ತಾರೆ. ಪ್ರಸ್ತುತ ಪ್ರಧಾನಿಗೆ ಇದಕ್ಕಿಂತ ಉತ್ತಮ ಆಯ್ಕೆ ಇನ್ನೊಂದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.