ಕರ್ನಾಟಕ

karnataka

100ನೇ 'ಕಿಸಾನ್ ರೈಲಿ'ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್​ವರೆಗೆ ಸಂಚರಿಸಲಿರುವ 100ನೇ "ಕಿಸಾನ್ ರೈಲಿಗೆ" ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಿ ಪ್ರಧಾನಿ ಮೋದಿ ಚಾಲನೆ ನೀಡಿದರು.

By

Published : Dec 28, 2020, 7:54 PM IST

Published : Dec 28, 2020, 7:54 PM IST

Modi praises his govt's policy
ಕಿಸಾನ್ ರೈಲಿ'ಗೆ ಪ್ರಧಾನಿ ಮೋದಿ ಹಸಿರು ನಿಶಾನೆ

ನವದೆಹಲಿ: ಕೃಷಿ ಉತ್ಪನ್ನಗಳನ್ನು ಹೆಚ್ಚಿಸಲು ಮತ್ತು ರೈತರನ್ನು ಬಲಪಡಿಸಲು ನಮ್ಮ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಐತಿಹಾಸಿಕ ಸುಧಾರಣೆಗಳನ್ನು ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್​ವರೆಗೆ ಸಂಚರಿಸಲಿರುವ 100ನೇ "ಕಿಸಾನ್ ರೈಲಿಗೆ" ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, ನಮ್ಮ ಸರ್ಕಾರದ ನೀತಿಗಳು ಸ್ಪಷ್ಟವಾಗಿವೆ ಮತ್ತು ಕೃಷಿ ಕ್ಷೇತ್ರವನ್ನು ಸುಧಾರಿಸುವಲ್ಲಿ ಪಾರದರ್ಶಕವಾಗಿವೆ. ರೈತರು ಮತ್ತು ಕೃಷಿ ಕ್ಷೇತ್ರವನ್ನು ಸಂಪೂರ್ಣ ಬಲಪಡಿಸುವ ಕಾರ್ಯವನ್ನು ಸರ್ಕಾರ ಮುಂದುವರೆಸಲಿದೆ ಎಂದರು.

ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ತೀವ್ರವಾಗಿರುವ ಸಂದರ್ಭದಲ್ಲಿ ಪ್ರಧಾನಿ ಈ ಮಾತನ್ನು ಹೇಳಿದ್ದಾರೆ. ಕೃಷಿ ಕಾನೂನುಗಳನ್ನು ನೇರವಾಗಿ ಉಲ್ಲೇಖಿಸದಿದ್ದರೂ ಸರ್ಕಾರದ ಕಾನೂನುಗಳು ರೈತರ ಹಿತಾಸಕ್ತಿಯ ಪರವಾಗಿವೆ ಎಂದಿದ್ದಾರೆ ಮತ್ತು ಪ್ರತಿಪಕ್ಷಗಳು ರೈತರನ್ನು ದಾರಿ ತಪ್ಪಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಓದಿ : ದೇಶದ ಮೊದಲ ಚಾಲಕರಹಿತ ರೈಲು ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ನಮ್ಮ ಸರ್ಕಾರ ಪ್ರಾರಂಭಿಸಿದ 'ಕಿಸಾನ್ ರೈಲು', ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಶೇ. 80ಕ್ಕಿಂತ ಹೆಚ್ಚು ತಮ್ಮ ಉತ್ಪನ್ನಗಳನ್ನು ದೂರದ ಮಾರುಕಟ್ಟೆಗಳಿಗೆ ಪೂರೈಸಲು ಸಹಾಯ ಮಾಡುತ್ತವೆ. ಇದು ರೈತರ ಆದಾಯವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಮತ್ತು ಹೊಸ ಸಾಧತ್ಯೆಗಳ ಬಗ್ಗೆ ರೈತರು ಎಷ್ಟು ಉತ್ಸುಕರಾಗಿದ್ದಾರೆ ಎಂಬುವುದಕ್ಕೆ ಇದು ಸಾಕ್ಷಿಯಾಗಿದೆ. ಸರಬರಾಜು ಸರಪಳಿ, ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಹೆಚ್ಚಿಸಲು ಮತ್ತು ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆ ತರಲು ಸರ್ಕಾರ ಸಹಾಯ ಮಾಡುತ್ತಿದೆ ಎಂದು ಪ್ರಧಾನಿ ಹೇಳಿದರು.

ಬಹು-ಸರಕು ರೈಲುಗಳು ಹೂ ಕೋಸು, ಕ್ಯಾಪ್ಸಿಕಂ, ಎಲೆಕೋಸು, ನುಗ್ಗೆಕಾಯಿ, ಮೆಣಸಿನಕಾಯಿ ಮತ್ತು ಈರುಳ್ಳಿಯಂತಹ ತರಕಾರಿಗಳನ್ನು ಹಾಗೂ ದ್ರಾಕ್ಷಿ, ಕಿತ್ತಳೆ, ದಾಳಿಂಬೆ, ಬಾಳೆಹಣ್ಣು ಮತ್ತು ಕಸ್ಟರ್ಡ್ ಸೇಬಿನಂತಹ ಹಣ್ಣುಗಳನ್ನು ಸಾಗಿಸಲಿವೆ ಎಂದು ಸರ್ಕಾರದ ಅಧಿಕೃತ ಮೂಲಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details