ಕರ್ನಾಟಕ

karnataka

ETV Bharat / bharat

ಮೋದಿ-ಬೋರಿಸ್​ ದೂರವಾಣಿ ಸಂಭಾಷಣೆ: ಭಾರತಕ್ಕೆ ಆಗಮಿಸದಿರಲು ಯುಕೆ ಪಿಎಂ​ ವಿಷಾದ! - ಮೋದಿ-ಬೋರಿಸ್​ ದೂರವಾಣಿ ಸಂಭಾಷಣೆ

ಈ ವರ್ಷದ ಗಣರಾಜ್ಯೋತ್ಸವದಂದು ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿದ್ದ ಇಂಗ್ಲೆಂಡ್​ ಪ್ರಧಾನಿ ಬೋರಿಸ್ ಜಾನ್ಸನ್​ ತಮ್ಮ ಪ್ರವಾಸ ಮುಂದೂಡಿದ್ದಾರೆ. ಹೀಗಾಗಿ ಗಣತಂತ್ರ ಸಂಭ್ರಮಾಚರಣೆಯಲ್ಲಿ ಅವರು ಭಾಗಿಯಾಗುತ್ತಿಲ್ಲ.

PM of UK Boris Johnson
PM of UK Boris Johnson

By

Published : Jan 5, 2021, 9:32 PM IST

ನವದೆಹಲಿ: ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾರತಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್​ ಆಗಮಿಸಬೇಕಾಗಿತ್ತು. ಆದರೆ ಕೊರೊನಾ ವೈರಸ್ ಹಾವಳಿ ಹೆಚ್ಚಿರುವ ಕಾರಣ ತಮ್ಮ ಪ್ರವಾಸ ಮುಂದೂಡಿದ್ದಾರೆ.

ಓದಿ: ಗಣರಾಜ್ಯೋತ್ಸವದಂದು ಅತಿಥಿಯಾಗಿ ಭಾರತಕ್ಕೆ ಆಗಮಿಸುತ್ತಿಲ್ಲ ಬ್ರಿಟನ್​ ಪ್ರಧಾನಿ!

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಯುಕೆ ಪ್ರಧಾನಿ ಬೋರಿಸ್​ ಜಾನ್ಸನ್​ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಗಣರಾಜ್ಯೋತ್ಸವದಂದು ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಹ್ವಾನಿಸಿದ್ದಕ್ಕಾಗಿ ಪ್ರಧಾನಿಗೆ ಅವರು ಧನ್ಯವಾದ ತಿಳಿಸಿದ್ದಾರೆ. ಆದರೆ ಬ್ರಿಟನ್​ನಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಕಾರಣ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ದಿನಗಳಲ್ಲಿ ಖಂಡಿತವಾಗಿ ಭಾರತಕ್ಕೆ ಭೇಟಿ ನೀಡುವುದಾಗಿ ಬ್ರಿಟನ್​ ಪ್ರಧಾನಿ ಇದೇ ವೇಳೆ ಪುನರುಚ್ಚರಿಸಿದ್ದಾರೆ. ಇನ್ನು ಯುಕೆಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ನಿಯಂತ್ರಣ ಮಾಡಿ ಎಂದು ಮೋದಿ ಸಲಹೆ ನೀಡಿದ್ದು, ಅದರಿಂದ ಆದಷ್ಟು ಬೇಗ ಹೊರಬರುವಂತೆ ಶುಭ ಹಾರೈಸಿದ್ದಾರೆ ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ABOUT THE AUTHOR

...view details