ನವದೆಹಲಿ: ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ನ ಫಲಾನುಭವಿಗಳು ಮತ್ತು ವ್ಯಾಕ್ಸಿನೇಟರ್‌ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಲಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ನಿನ್ನೆ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ವಾರಣಾಸಿಯಲ್ಲಿಂದು ನಡೆಯಲಿರುವ ಕೋವಿಡ್-19 ಇನಾಕ್ಯುಲೇಷನ್ ಡ್ರೈವ್‌ನ ಫಲಾನುಭವಿಗಳು ಮತ್ತು ವ್ಯಾಕ್ಸಿನೇಟರ್‌ಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.
ಸಂವಾದದಲ್ಲಿ ಭಾಗವಹಿಸುವವರು ವ್ಯಾಕ್ಸಿನೇಷನ್ ಬಗ್ಗೆ ತಮ್ಮ ಮೊದಲ ಅನುಭವವನ್ನು ಹಂಚಿಕೊಳ್ಳಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ಗೆ ಈಗಾಗಲೇ ಭಾರತದಲ್ಲಿ ಚಾಲನೆ ಸಿಕ್ಕಿದ್ದು, ಯಶಸ್ವಿಯಾಗಿ ನಡೆಯುತ್ತಿದೆ. ನಮ್ಮ ಮುಂಚೂಣಿಯ ಯೋಧರು ದೇಶಾದ್ಯಂತ ಲಸಿಕೆ ಪಡೆಯುತ್ತಿದ್ದಾರೆ. ಇಂದು ಮಧ್ಯಾಹ್ನ 1:15ಕ್ಕೆ ನಾನು ವಾರಣಾಸಿಯಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್‌ನ ಫಲಾನುಭವಿಗಳು ಮತ್ತು ವ್ಯಾಕ್ಸಿನೇಟರ್‌ಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.