ವಾರಣಾಸಿ(ಉತ್ತರ ಪ್ರದೇಶ): ಯುದ್ಧಪೀಡಿತ ಉಕ್ರೇನ್ನಿಂದ ಸಾವಿರಾರು ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಇದರಲ್ಲಿ ಉತ್ತರ ಪ್ರದೇಶದ ವಿದ್ಯಾರ್ಥಿಗಳು ಸಹ ಸೇರಿಕೊಂಡಿದ್ದಾರೆ. ಭಾರತಕ್ಕೆ ಮರಳಿರುವ ವಿದ್ಯಾರ್ಥಿಗಳೊಂದಿಗೆ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು.
ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮೋದಿ ಮಾತುಕತೆ
ಉಕ್ರೇನ್ನಿಂದ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿರುವ ಉತ್ತರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಮಾತುಕತೆ ನಡೆಸಿದರು.
Modi interacted with students
ಉತ್ತರಪ್ರದೇಶ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ವಾರಣಾಸಿಯಲ್ಲಿ ಇಂದು ಪ್ರಚಾರ ಸಭೆ ನಡೆಸಿದರು. ಇದರ ನಡುವೆ ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳ ಜತೆ ಅವರು ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್ನಲ್ಲಿ ಅನುಭವಿಸಿರುವ ಕಷ್ಟಗಳನ್ನು ವಿದ್ಯಾರ್ಥಿಗಳು ವಿವರಿಸಿದರು.
ಇದನ್ನೂ ಓದಿ:ಉಕ್ರೇನ್ ಮೇಲೆ ರಷ್ಯಾ ಯುದ್ಧದ ವಿಚಾರದಲ್ಲಿ ಭಾರತದ ತಟಸ್ಥ ನಿಲುವೇಕೆ? ಇಲ್ಲಿದೆ ಉತ್ತರ