ಕರ್ನಾಟಕ

karnataka

ETV Bharat / bharat

ಮನಮೋಹನ್​ ಸಿಂಗ್​ ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದ ಪ್ರಧಾನಿ ಮೋದಿ - ದೆಹಲಿಯ ಏಮ್ಸ್​ ಆಸ್ಪತ್ರೆಗೆ ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​​ ದಾಖಲು

ಆರೋಗ್ಯ ಸಮಸ್ಯೆಯಿಂದ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​​ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಗಣ್ಯ ನಾಯಕರು ಟ್ಟೀಟ್​ ಮೂಲಕ ಪ್ರಾರ್ಥಿಸಿದ್ದಾರೆ.

ಮನಮೋಹನ್​ ಸಿಂಗ್​
ಮನಮೋಹನ್​ ಸಿಂಗ್​

By

Published : Oct 14, 2021, 12:08 PM IST

ನವದೆಹಲಿ: ಜ್ವರ ಮತ್ತು ನಿಶಕ್ತಿ ಹಿನ್ನೆಲೆಯಲ್ಲಿ ದೆಹಲಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಟ್ಟೀಟ್​​ ಮಾಡಿರುವ ಅವರು, ಡಾ.ಮನಮೋಹನ್ ಸಿಂಗ್​ ಜೀ ಅವರು ಶೀಘ್ರ ಚೇತರಿಸಿಕೊಳ್ಳುವಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಏಮ್ಸ್​ಗೆ ಭೇಟಿ ನೀಡಿ ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಚನ್ನಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ನಾಯಕರು ಟ್ಟೀಟ್​ ಮೂಲಕ ಡಾ.​ ಸಿಂಗ್ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ್ದಾರೆ.

ABOUT THE AUTHOR

...view details