ನವದೆಹಲಿ :ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಅಮೆರಿಕದ ಸೆನೆಟರ್ ಜಾನ್ ಕಾರ್ನಿನ್(Senator John Cornyn) ನೇತೃತ್ವದ ಅಮೆರಿಕದ ಸಂಸದರ ನಿಯೋಗವನ್ನು (US Congressional delegation) ಭೇಟಿಯಾಗಿ ಭಾರತ ಮತ್ತು ಅಮೆರಿಕದ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸುವ ಸಲುವಾಗಿ ಹಾಗೂ ಭಯೋತ್ಪಾದನೆ, ಹವಾಮಾನ ಬದಲಾವಣೆ ಚರ್ಚೆ ನಡೆಸಿದ್ದಾರೆ.
ದಕ್ಷಿಣ ಏಷ್ಯಾ ಮತ್ತು ಇಂಡೋ-ಪೆಸಿಫಿಕ್ ಪ್ರದೇಶ ( Indo-Pacific region) ಸೇರಿದಂತೆ ಪರಸ್ಪರ ಹಿತಾಸಕ್ತಿ ಇರುವ ಪ್ರಾದೇಶಿಕ ವಿಷಯಗಳ ಕುರಿತು ಪ್ರಧಾನಿ ಮತ್ತು ಅಮೆರಿಕದ ನಿಯೋಗದ ನಡುವೆ ಸ್ಪಷ್ಟ ಚರ್ಚೆ ನಡೆದಿದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆ ನೀಡಿದೆ.