ನವದೆಹಲಿ:ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನ್ಮದಿನಕ್ಕೆ ಪ್ರಧಾನಿ ನರೆಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಶುಭಾಶಯ ಕೋರಿದ್ದಾರೆ.
'ಸೋನಿಯಾ ಗಾಂಧಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ದೇವರು ನಿಮಗೆ ಉತ್ತಮ ಆರೋಗ್ಯ ನೀಡಲಿ' ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
'ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಜೀ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆಯುರಾರೋಗ್ಯವಿರಲಿ' ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಓದಿ: ಅಪೌಷ್ಟಿಕತೆ ಕೊನೆಗೊಳಿಸಲು ಇದು ಸಕಾಲ: ಎಚ್ಚರಿಸಿದ ಜಾಗತಿಕ ಪೌಷ್ಟಿಕಾಂಶ ವರದಿ
ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನವನ್ನು ಬೆಂಬಲಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈ ಬಾರಿ ತಮ್ಮ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದಾರೆ.