ರಾಜ್‌ಕೋಟ್ (ಗುಜರಾತ್): ಮುಂಬರಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುಜರಾತ್‌ನಲ್ಲಿ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಇಂದು ರಾಜ್ಯದಲ್ಲಿ ಮೂರು ಬ್ಯಾಕ್ ಟು ಬ್ಯಾಕ್ ಭಾರತೀಯ ಜನತಾ ಪಕ್ಷದ (ಬಿಜೆಪಿ) ವಿಜಯ ಸಂಕಲ್ಪ ಸಮ್ಮೇಳನ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೊದಲ ರ್ಯಾಲಿ ಸುರೇಂದ್ರನಗರದಲ್ಲಿ ಬೆಳಗ್ಗೆ 11 ಗಂಟೆಗೆ, ನಂತರ ಜಬುಸರ್‌ನಲ್ಲಿ ಮಧ್ಯಾಹ್ನ 1 ಗಂಟೆಗೆ ಮತ್ತು ನಂತರ ನವಸಾರಿಯಲ್ಲಿ ಮಧ್ಯಾಹ್ನ 3 ರ ಸುಮಾರಿಗೆ ನಡೆಯಲಿದೆ.
ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ರಾಜ್ಯದ ದ್ವಾರಕಾ, ಸೋಮನಾಥ್, ಜುನಾಗಢ ಮತ್ತು ಕಛ್ ಜಿಲ್ಲೆಗಳಲ್ಲಿ ನಾಲ್ಕು ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ದ್ವಾರಕಾ ಜಿಲ್ಲೆಯ ಖಂಬಲಿಯಾ ವಿಧಾನಸಭಾ ಕ್ಷೇತ್ರದಲ್ಲಿ ಷಾ ಮೊದಲ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ಕೋಡಿನಾರ್‌ನಲ್ಲಿರುವ ಸೋಮನಾಥದಲ್ಲಿ ಮತ್ತೊಂದು ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಜುನಾಗಢ್‌ನ ಮಂಗ್ರೋಲ್ ವಿಧಾನಸಭಾ ಕ್ಷೇತ್ರದಲ್ಲಿ ಮತ್ತು ಕಛ್‌ನ ಭುಜ್ ವಿಧಾನಸಭಾ ಕ್ಷೇತ್ರದಲ್ಲಿ ಮಧ್ಯಾಹ್ನ 3 ಮತ್ತು 4 ಗಂಟೆಗೆ ನಡೆಯಲಿವೆ ಇನ್ನೆರಡು ಸಭೆ ನಡೆಯಲಿವೆ.
ಗುಜರಾತ್ ಚುನಾವಣೆಯ ಬಿಜೆಪಿಯ ಸ್ಟಾರ್ ಪ್ರಚಾರಕರೂ ಆಗಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹ್ಮದವಾಡ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಶನಿವಾರ ಸಂಜೆ ತವರು ರಾಜ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ವಲ್ಸಾದ್‌ನಲ್ಲಿ ರೋಡ್ ಶೋ ನಡೆಸಿ ಜನರನ್ನು ಉದ್ದೇಶಿಸಿ ಮಾತನಾಡಿದರು.