ನವದೆಹಲಿ: ರಂಜಾನ್ ಮಾಸಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಸಮಸ್ತ ಮುಸ್ಲಿಂ ಧರ್ಮೀಯರಿಗೆ ಶುಭಾಶಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಮೋದಿ, 'ಸಮಸ್ತ ಮುಸ್ಲಿಮರಿಗೆ ಪವಿತ್ರ ರಂಜಾನ್ ಹಬ್ಬದ ಶುಭಾಶಯಗಳು. ಈ ಪವಿತ್ರ ತಿಂಗಳು ಬಡವರ ಸೇವೆ ಮಾಡಲು ಜನರನ್ನು ಪ್ರೇರೇಪಿಸಲಿ. ಇದು ನಮ್ಮ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ' ಎಂದು ಆಶಿಸಿದ್ದಾರೆ.