ನವದೆಹಲಿ:ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ 2 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ದಾಖಲಾಗುತ್ತಿವೆ. ಇದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಲೆನೋವಾಗಿ ಪರಿಣಮಿಸಿದ್ದು, ಹೀಗಾಗಿ ಮಹತ್ವದ ಸಭೆ ಕರೆದಿದ್ದಾರೆ.
ಕೊರೊನಾ ಆರ್ಭಟ: 8 ಗಂಟೆಗೆ ಮಹತ್ವದ ಸಭೆ ಕರೆದ ನರೇಂದ್ರ ಮೋದಿ - ಪ್ರಧಾನಿ ಮೋದಿ ಕೋವಿಡ್ ಸಭೆ
ಮಹಾಮಾರಿ ಕೊರೊನಾ ವೈರಸ್ 2ನೇ ಅಲೆ ಜೋರಾಗಿದ್ದು, ಪ್ರತಿದಿನ ಲಕ್ಷಾಂತರ ಕೋವಿಡ್ ಪ್ರಕರಣ ದಾಖಲಾಗುತ್ತಿವೆ. ಹೀಗಾಗಿ ಮೋದಿ ಮಹತ್ವದ ಸಭೆ ಕರೆದಿದ್ದಾರೆ.
![ಕೊರೊನಾ ಆರ್ಭಟ: 8 ಗಂಟೆಗೆ ಮಹತ್ವದ ಸಭೆ ಕರೆದ ನರೇಂದ್ರ ಮೋದಿ Modi](https://etvbharatimages.akamaized.net/etvbharat/prod-images/768-512-11442015-thumbnail-3x2-wdfdfdfd.jpg)
ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದಿಢೀರ್ ಸಭೆ ಕರೆದಿದ್ದು, ಇದರಲ್ಲಿ ಉನ್ನತ ಅಧಿಕಾರಿಗಳು, ತಜ್ಞರು, ವಿವಿಧ ರಾಜ್ಯಗಳ ಪ್ರಮುಖ ಸಚಿವರು ಭಾಗಿಯಾಗುತ್ತಿದ್ದಾರೆ. ದೇಶದಲ್ಲಿನ ಕೊರೊನಾ ಪರಿಸ್ಥಿತಿ ಹಾಗೂ ಲಸಿಕೆ ವಿತರಣೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
ದೇಶದಲ್ಲಿ ಎರಡನೇ ಹಂತದ ಕೋವಿಡ್ ಅಲೆ ಜೋರಾಗಿರುವ ಕಾರಣ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿ, ಮಹತ್ವದ ಸೂಚನೆ ನೀಡಿದ್ದಾರೆ. ಇಷ್ಟಾದರೂ ದೇಶದಲ್ಲಿ ಕೊರೊನಾ ವೈರಸ್ ಹಾವಳಿ ಕಡಿಮೆಯಾಗದ ಕಾರಣ ಇದೀಗ ಮಹತ್ವದ ಸಭೆ ಆಯೋಜನೆ ಮಾಡಿದ್ದಾರೆ.