ಕರ್ನಾಟಕ

karnataka

ETV Bharat / bharat

ಕೇರಳಕ್ಕೆ ಅಪ್ಪಳಿಸಿದ ಮುಂಗಾರು.. 48 ಗಂಟೆಯಲ್ಲಿ ಕರ್ನಾಟಕಕ್ಕೆ ಮಾನ್ಸೂನ್​ ಪ್ರವೇಶ - ಕೇರಳಕ್ಕೆ ಅಪ್ಪಳಿಸಿದ ಮುಂಗಾರು

ಭಾರತೀಯ ಹವಾಮಾನ ಇಲಾಖೆ ರೈತರು ಸೇರಿದಂತೆ ದೇಶದ ವಾಸಿಗಳಿಗೆ ಸಿಹಿ ಸುದ್ದಿ ನೀಡಿದೆ. ಮುಂಗಾರು ಭಾರತಕ್ಕೆ ಪ್ರವೇಶಿಸಿದ್ದು, ಇನ್ನು 48 ಗಂಟೆಗಳಲ್ಲಿ ಕರ್ನಾಟಕಕ್ಕೆ ಎಂಟ್ರಿ ಕೊಡಲಿದೆ ಎಂದು ಹೇಳಿದೆ.

Monsoon Reaches Indian Mainland  IMD Officially Declares Onset Over Kerala  Monsoon Reaches Indian  Monsoon Reaches kerala  ಭಾರತಕ್ಕೆ ಅಪ್ಪಳಿಸಿದ ಮುಂಗಾರು  48 ಗಂಟೆ ಅಂತರದಲ್ಲಿ ಕರ್ನಾಟಕಕ್ಕೆ ಮಾನ್ಸೂನ್​ ಪ್ರವೇಶ  ಭಾರತೀಯ ಹವಾಮಾನ ಇಲಾಖೆ  ದೇಶದ ವಾಸಿಗಳಿಗೆ ಸಿಹಿ ಸುದ್ದಿ
ಭಾರತಕ್ಕೆ ಅಪ್ಪಳಿಸಿದ ಮುಂಗಾರು

By

Published : Jun 8, 2023, 1:58 PM IST

ನವದೆಹಲಿ​: ಭಾರತೀಯ ಹವಾಮಾನ ಇಲಾಖೆ (IMD) ಸಿಹಿ ಸುದ್ದಿ ನೀಡಿದೆ. ನೈರುತ್ಯ ಮುಂಗಾರು ಕೊನೆಗೂ ದೇಶವನ್ನು ಪ್ರವೇಶಿಸಿದೆ. ಗುರುವಾರ ಕೇರಳ ಕರಾವಳಿಗೆ ಅಪ್ಪಳಿಸಿರುವುದಾಗಿ ಐಎಂಡಿ ಅಧಿಕೃತವಾಗಿ ಪ್ರಕಟಿಸಿದೆ. ಹವಾಮಾನ ಇಲಾಖೆ ನಿರೀಕ್ಷಿಸಿದ್ದಕ್ಕಿಂತ ಏಳು ದಿನಗಳ ನಂತರ ಮುಂಗಾರು ದೇಶವನ್ನು ಪ್ರವೇಶಿಸಿದೆ.

ಪ್ರಸ್ತುತ, ನೈರುತ್ಯ ಮುಂಗಾರು ಲಕ್ಷದ್ವೀಪ ಮತ್ತು ಕೇರಳದಲ್ಲಿ ವ್ಯಾಪಿಸಿದೆ ಎಂದು ಹವಾಮಾನ ಇಲಾಖೆ ಬಹಿರಂಗಪಡಿಸಿದೆ. ಮುಂಗಾರು ಆರಂಭವಾದ ಕಾರಣ ಕೇರಳದಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಮಳೆಯಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ, ಕೇರಳದ ಇತರ ಭಾಗಗಳು, ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಚಲಿಸಲು ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿವೆ. ಆದರೆ, ಮೊದಲ ವಾರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ, ನೈಋತ್ಯ ಮಾನ್ಸೂನ್ ಜೂನ್ 1 ರಂದು ಕೇರಳ ಕರಾವಳಿಯನ್ನು ಅಪ್ಪಳಿಸಬೇಕಿತ್ತು. ಹವಾಮಾನ ಬದಲಾವಣೆ ಮತ್ತು ಚಂಡಮಾರುತದ ಚಲನೆಯಿಂದಾಗಿ, ಇದು ಒಂದು ವಾರ ತಡವಾಗಿ ದೇಶವನ್ನು ಪ್ರವೇಶಿಸಿತು. ಕಳೆದ ವರ್ಷ ಮೇ 29 ರಂದು, 2021 ರಲ್ಲಿ ಜೂನ್ 3 ರಂದು ಮತ್ತು 2020 ರಲ್ಲಿ ಜೂನ್ 1 ರಂದು ಕರಾವಳಿಯನ್ನು ಅಪ್ಪಳಿಸಿತು.

ಈ ಬಾರಿ ಎಲ್​ನಿನೋ ಪರಿಣಾಮ ಸಮುದ್ರದ ಮೇಲೆ ಬೀರುತ್ತದೆ.. ಈ ಸೀಸನ್​ನಲ್ಲಿ ದೇಶದಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಏಪ್ರಿಲ್​ನಲ್ಲಿ ಘೋಷಿಸಿದ್ದು ಗೊತ್ತೇ ಇದೆ. ನಮ್ಮ ದೇಶದಲ್ಲಿ 52% ನಿವ್ವಳ ಸಾಗುವಳಿ ಭೂಮಿ ಮಳೆಯೇ ಮುಖ್ಯ ಆಧಾರವಾಗಿದೆ. ದೇಶದ ಒಟ್ಟು ಕೃಷಿ ಉತ್ಪಾದನೆಯ 40% ಈ ಸಾಗುವಳಿ ಭೂಮಿಯಿಂದ ಬರುತ್ತದೆ. ಅದಕ್ಕಾಗಿಯೇ ನೈಋತ್ಯ ಮಾನ್ಸೂನ್ ಭಾರತದ ಆಹಾರ ಭದ್ರತೆ ಮತ್ತು ಆರ್ಥಿಕ ಸ್ಥಿರತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಓದಿ:ತೊಗರಿ, ಭತ್ತ, ರಾಗಿ ಸೇರಿದಂತೆ ಮುಂಗಾರು ಹಂಗಾಮಿನ ಬೆಳೆಗಳಿಗೆ MSP ಹೆಚ್ಚಿಸಿದ ಕೇಂದ್ರ ಸರ್ಕಾರ

ಇದಕ್ಕೂ ಮುನ್ನ ಜೂನ್​​ 7 ಅಥವಾ 8ರ ವೇಳೆಗೆ ಮುಂಗಾರು ಕೇರಳಕ್ಕೆ ಅಪ್ಪಳಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ನೈಋತ್ಯ ಮಾನ್ಸೂನ್‌ ಉತ್ತರದ ಗಡಿ ಲಕ್ಷದ್ವೀಪದ ದ್ವೀಪ ಪ್ರದೇಶ ಮಿನಿಕೋಯ್ ಮೂಲಕ ಹಾದುಹೋಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿತ್ತು. ದಕ್ಷಿಣ ಅರಬ್ಬಿ ಸಮುದ್ರದ ಮೇಲೆ ಪಶ್ಚಿಮ ಮಾರುತಗಳು ಕೇಂದ್ರಿಕೃತವಾಗುವುದಿಂದ ಮಳೆ ಬೀಳಲು ಅನುಕೂಲಕರ ಪರಿಸ್ಥಿತಿಗಳನ್ನ ನಿರ್ಮಾಣ ಮಾಡಲಿದೆ. ಇದರೊಂದಿಗೆ, ಪಶ್ಚಿಮ ಮಾರುತಗಳ ಆಳವು ಕ್ರಮೇಣ ಹೆಚ್ಚುತ್ತಾ ಸಾಗುತ್ತದೆ. ಆಗ್ನೇಯ ಅರಬ್ಬಿ ಸಮುದ್ರದ ಮೇಲೂ ಮೋಡದ ಪ್ರಮಾಣ ಹೆಚ್ಚುತ್ತಿದ್ದು. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಮಾನ್ಸೂನ್‌ನ ಆರಂಭಕ್ಕೆ ಈ ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣ ಆಗಬಹುದು ಎಂದು ನಾವು ನಿರೀಕ್ಷಿಸುತ್ತಿದ್ದೇವೆ ಎಂದು ಐಎಂಡಿ ಪ್ರಕಟಣೆಯಲ್ಲಿ ತಿಳಿಸಿತ್ತು. ಅದರಂತೆ ಇಂದು ಕೇರಳಕ್ಕೆ ನೈರುತ್ಯ ಮುಂಗಾರು ಅಪ್ಪಳಿಸಿದ್ದು, ಮಾನ್ಸೂನ್​ ಮಾರುತಗಳು ಕೇರಳ ತಲುಪಿದ ನಂತರ, ಕರ್ನಾಟಕ, ತಮಿಳುನಾಡು ಮತ್ತು ಈಶಾನ್ಯದ ಭಾಗಗಳಿಗೆ ಚಲಿಸಲಿವೆ.

ABOUT THE AUTHOR

...view details