ಕರ್ನಾಟಕ

karnataka

ETV Bharat / bharat

ಮೂಸೆ ವಾಲಾ ಹತ್ಯೆ: ಲಾರೆನ್ಸ್ ಬಿಷ್ಣೋಯ್ ಜೊತೆ ಸಂಬಂಧ ಹೊಂದಿದ್ದ ಇಬ್ಬರ ಬಂಧನ - ಲಾರೆನ್ಸ್ ಬಿಷ್ಣೋಯ್ ಜೊತೆ ಸಂಬಂಧ ಹೊಂದಿದ್ದ ಇಬ್ಬರ ಬಂಧನ

ಮೋಗಾ ಪೊಲೀಸರು ಶುಕ್ರವಾರ ಹರಿಯಾಣದ ಫತೇಹಾಬಾದ್‌ನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಪವನ್ ಬಿಷ್ಣೋಯ್ ಮತ್ತು ನಸೀಬ್ ಎಂದು ಗುರುತಿಸಲಾಗಿದೆ. ಬಿಷ್ಣೋಯ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ದಾಳಿಯ ಹೊಣೆಯನ್ನು ಈ ಗ್ಯಾಂಗ್​ ಹೊತ್ತುಕೊಂಡಿದೆ.

ಮೂಸೆ ವಾಲಾ
ಮೂಸೆ ವಾಲಾ

By

Published : Jun 3, 2022, 4:20 PM IST

ಚಂಡೀಗಢ: ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಜೊತೆ ನಂಟು ಹೊಂದಿದ್ದ ಇಬ್ಬರನ್ನು ಮೋಗಾ ಪೊಲೀಸರು ಶುಕ್ರವಾರ ಹರಿಯಾಣದ ಫತೇಹಾಬಾದ್‌ನಲ್ಲಿ ಬಂಧಿಸಿದ್ದಾರೆ. ಬಂಧಿತರಿಬ್ಬರು ಸಿದ್ದು ಮೂಸೆ ವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಸಿಸಿಟಿವಿ ದೃಶ್ಯಾವಳಿಯಲ್ಲಿ ಬೊಲೆರೊ ವಾಹನವನ್ನು ನೋಡಿದ್ದರಿಂದ ನಗರದ ವಿವಿಧೆಡೆ ಮೋಗಾ ಪೊಲೀಸರು ಫತೇಹಾಬಾದ್‌ನಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯ ಬಂಧಿತರನ್ನು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತ ವ್ಯಕ್ತಿಗಳನ್ನು ಪವನ್ ಬಿಷ್ಣೋಯ್ ಮತ್ತು ನಸೀಬ್ ಎಂದು ಗುರುತಿಸಲಾಗಿದೆ.

ಮೊಗಾ ಜಿಲ್ಲೆಯಲ್ಲಿ ಅವರ ವಿರುದ್ಧ ದಾಖಲಾಗಿದ್ದ ಪ್ರತ್ಯೇಕ ಪ್ರಕರಣದಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಮೂಸೆವಾಲಾ ಹತ್ಯೆಯ ಪ್ರಮುಖ ಶಂಕಿತ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ಆದರೆ, ದೆಹಲಿ ಪೊಲೀಸರು ವಿಚಾರಣೆ ನಡೆಸುತ್ತಿರುವಾಗ ಹತ್ಯೆಯಲ್ಲಿ ಭಾಗಿಯಾಗಿಲ್ಲ ಎಂದು ಆತ ಹೇಳಿದ್ದಾನೆ.

ಇದನ್ನೂ ಓದಿ:ಮೂಸೆ ವಾಲಾ ಹತ್ಯೆ ಪ್ರಕರಣ: ನಮ್ಮ ಮಗ ನಿರಪರಾಧಿ, ನಿಜವಾದ ಆರೋಪಿಯನ್ನು ಬಂಧಿಸಿ ಎಂದ ಮನ್​ಪ್ರೀತ್​ ಪೋಷಕರು

ABOUT THE AUTHOR

...view details