ಕರ್ನಾಟಕ

karnataka

ETV Bharat / bharat

ಮೂಸೆ ವಾಲಾ ಹತ್ಯೆ ಪ್ರಕರಣ : ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಕರೆ - Moose wala murder case

ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾರೀ ಸುದ್ದಿಯೊಂದು ಹೊರಬಿದ್ದಿದೆ. ಮಾನಸ ಪೊಲೀಸ್ ಅಧಿಕಾರಿಯೊಬ್ಬರಿಗೆ ದರೋಡೆಕೋರರಿಂದ ಫೋನ್ ಕರೆ ಬಂದಿದ್ದು, ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ..

ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಕರೆ
ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಕರೆ

By

Published : Jun 6, 2022, 7:26 PM IST

ಮಾನಸ (ಪಂಜಾಬ್​) :ಮೂಸೆವಾಲಾ ಕೊಲೆ ಪ್ರಕರಣದಲ್ಲಿ ಪ್ರಮುಖ ಮಾಹಿತಿಯೊಂದು ಹೊರ ಬಿದ್ದಿದೆ. ಮಾನಸ ಪೊಲೀಸ್ ಅಧಿಕಾರಿಯೊಬ್ಬರಿಗೆ ದರೋಡೆಕೋರರಿಂದ ಫೋನ್ ಕರೆ ಮೂಲಕ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಸಿದ್ದು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗೆ ಬೆದರಿಕೆ ಬಂದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಸದ್ಯ ಈ ವಿಚಾರದಲ್ಲಿ ಪೊಲೀಸ್ ಅಧಿಕಾರಿಗಳು ಏನನ್ನೂ ಹೇಳಲು ಸಿದ್ಧರಿಲ್ಲ. ಘಟನೆ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಲು ಮುಂದಾಗಿದ್ದಾರೆ.

ತನಿಖೆ ಮುಂದುವರೆಸಿದರೆ ಘೋರ ಪರಿಣಾಮ ಉಂಟಾಗಬಹುದಾಗಿದೆ. ತನಿಖೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಕೆನಡಾ ಮತ್ತು ಇತರ ದೇಶಗಳಿಂದ ಬೆದರಿಕೆ ಕರೆಗಳು ಬಂದಿವೆ. ಪರಿಣಾಮ ಆರೋಪಿಗಳ ಪತ್ತೆಗೆ ಪೊಲೀಸರು ತುಸು ಕಷ್ಟಪಡಬೇಕಾಗಿದೆ.

ಇನ್ನು ಮೂಸೆವಾಲಾ ಹತ್ಯೆ ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಆಂಟಿ ಗ್ಯಾಂಗ್‌ಸ್ಟರ್ ಟಾಸ್ಕ್ ಫೋರ್ಸ್ ಅನ್ನು ಎಡಿಜಿಪಿ ಪ್ರಮೋದ್ ಬಾನ್‌ ಅವರು ನೋಡಿಕೊಳ್ಳುತ್ತಿದ್ದಾರೆ. ಐಜಿ ಜಸ್ಕರನ್ ಸಿಂಗ್ ತನಿಖೆಯ ನೇತೃತ್ವ ವಹಿಸಿದ್ದಾರೆ. ತಂಡವು ಮಾನ್ಸಾದ ಹಲವಾರು ಹಿರಿಯ ಅಧಿಕಾರಿಗಳನ್ನು ಒಳಗೊಂಡಿದೆ. ಮೂಸೆವಾಲಾ ಪ್ರಕರಣದಲ್ಲಿ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: 2006 ರ ವಾರಣಾಸಿ ಬಾಂಬ್ ಸ್ಫೋಟ ಪ್ರಕರಣ.. ಉಗ್ರನಿಗೆ ಮರಣದಂಡನೆ ಶಿಕ್ಷೆ ಪ್ರಕಟ

For All Latest Updates

ABOUT THE AUTHOR

...view details