ಅಹಮದಾಬಾದ್ (ಗುಜರಾತ್): ಗುಜರಾತ್‌ನ ಮೊರ್ಬಿ ನಗರದಲ್ಲಿ ತೂಗು ಸೇತುವೆ ಕುಸಿತ ದುರಂತದಲ್ಲಿ ಸುಮಾರು 60ಕ್ಕೂ ಜನರು ಮೃತಪಟ್ಟಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ವೇಳೆ ಮೃತರು ಮತ್ತು ಗಾಯಾಳುಗಳ ಕುಟುಂಬಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಪರಿಹಾರ ಘೋಷಿಸಿವೆ.
ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸುಮಾರು ಶತಮಾನದಷ್ಟು ಹಳೆಯದಾದ ತೂಗು ಸೇತುವೆ ಭಾನುವಾರ ಸಂಜೆ ಕುಸಿದು ಬಿದ್ದಿದೆ. ಇದರಿಂದ ಮಹಿಳೆಯರು ಮತ್ತು ಮಕ್ಕಳು ಸೇರಿ ಸುಮಾರು ಜನರು ನದಿಗೆ ಬಿದ್ದಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಪ್ರಧಾನಿ ಮೋದಿ ಅವರೊಂದಿಗಿನ ತಮ್ಮ ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ, ಈಗಾಗಲೇ ರಕ್ಷಣಾ ಕಾರ್ಯಾಚರಣೆಗಾಗಿ ಎಸ್‌ಡಿಆರ್‌ಎಫ್ ಸೇರಿದಂತೆ ಇತರ ಪಡೆಗಳು ರಕ್ಷಣಾ ಕಾರ್ಯ ನಡೆಸಿವೆ. ಗೃಹ ಸಚಿವರನ್ನು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮೇಲುಸ್ತುವಾರಿ ಮಾಡುವಂತೆ ಸೂಚಿಸಿರುವುದಾಗಿ ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.