ಭೋಪಾಲ್(ಮಧ್ಯಪ್ರದೇಶ): ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಾಗಿರುವ ಉನ್ನತ ಸ್ಥಾನದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಧಿವೇಶನದಲ್ಲಿ ಖುದ್ದಾಗಿ ಮಾಹಿತಿ ನೀಡಿದೆ.
ಮಧ್ಯಪ್ರದೇಶದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಈ ವೇಳೆ ಕಾಂಗ್ರೆಸ್ ಶಾಸಕ ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಸಚಿವರು, ಐಎಎಸ್ - ಐಪಿಎಸ್ ಮತ್ತು ಐಎಫ್ಎಸ್ನ 100ಕ್ಕೂ ಹೆಚ್ಚು ಅಧಿಕಾರಿಗಳು ಭ್ರಷ್ಟರಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರ ನೀಡಿರುವ ಮಾಹಿತಿ ಪ್ರಕಾರ 35 ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, 28 ಮಂದಿ ವಿರುದ್ಧ ಇಒಡಬ್ಲ್ಯೂ ಹಾಗೂ 20 ಐಪಿಎಸ್ ಮತ್ತು 39 ಐಎಫ್ಎಸ್ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರದ ದೂರು ದಾಖಲಾಗಿದೆ ಎಂದು ತಿಳಿಸಿದೆ.