ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ 2ನೇ ಹಂತದ ಕೋವಿಡ್ ಅಲೆ ಜೋರಾಗಿದ್ದು, ಇದರಿಂದ ಹೊರಬರಲು ಅತಿ ಹೆಚ್ಚು ಸೋಂಕಿತ ಪ್ರಕರಣಗಳಿರುವ ಪ್ರದೇಶಗಳಲ್ಲಿ 6ರಿಂದ 8 ವಾರಗಳ ಲಾಕ್ಡೌನ್ ಘೋಷಣೆ ಅನಿವಾರ್ಯ ಎಂದು ಐಸಿಎಂಆರ್ ಮುಖ್ಯಸ್ಥ ಡಾ. ಬಲರಾಮ ಭಾರ್ಗವ್ ಅಭಿಪ್ರಾಯಪಟ್ಟಿದ್ದಾರೆ.
ಸಂದರ್ಶನವೊಂದರಲ್ಲಿ ಭಾಗಿಯಾಗಿ ಮಾತನಾಡಿದ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ, ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಿರುವ ಪ್ರದೇಶ ಅಥವಾ ಜಿಲ್ಲೆಗಳನ್ನ ಸಂಪೂರ್ಣವಾಗಿ ಲಾಕ್ಡೌನ್ ಮಾಡಬೇಕು ಎಂದಿದ್ದಾರೆ.
ಕೋವಿಡ್ ಪರೀಕ್ಷೆಗೊಳಗಾದವರ ಪೈಕಿ ಶೇ.10ಕ್ಕಿಂತಲೂ ಹೆಚ್ಚಿನ ಮಂದಿಯಲ್ಲಿ ಸೋಂಕು ದೃಢಪಡುತ್ತಿರುವ ಜಿಲ್ಲೆಯನ್ನ ಸಂಪೂರ್ಣವಾಗಿ ಲಾಕ್ಡೌನ್ ಹಾಗೂ ಪಾಸಿಟಿವಿಟಿ ದರ ಶೇ. 5ರಿಂದ 10ರೊಳಗೆ ಇರುವ ಜಿಲ್ಲೆಗಳಲ್ಲಿ ಚಟುವಟಿಕೆ ನಡೆಸಲು ಅವಕಾಶ ನೀಡಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.