ಅಹಮದಾಬಾದ್(ಗುಜರಾತ್) :ಇಲ್ಲಿನ ಕಂಕಾರಿಯಾ ಕೆರೆಗೆ ಹಾರಿ ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎಂದು ಅಂದಾಜಿಸಲಾಗಿದೆ. ಕೃಷ್ಣಾನಗರದಲ್ಲಿ ವಾಸಿಸುತ್ತದ್ದ ಭಾರತಿ ಮೋದಿ(27) ಮತ್ತು ಮಗಳು ಜಿಯಾ(6) ಮೃತ ದುರ್ದೈವಿಗಳು.
ತಾಯಿ ಮಗಳು ಕೆರೆಗೆ ಹಾರಿ ಆತ್ಮಹತ್ಯೆ - ಈಟಿವಿ ಭಾರತ್ ಕನ್ನಡ
ಅಹಮದಾಬಾದ್‌ನ ನರೋಡಾ ಪ್ರದೇಶದಲ್ಲಿ ವಿವಾಹಿತ ಮಹಿಳೆ ತನ್ನ ಮಗಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ.

ಮುಳುಗಿ ಸಾವು
ತರಕಾರಿ ತರಲೆಂದು ಮಾರುಕಟ್ಟೆಗೆ ಹೋದ ಇಬ್ಬರು ಕೆರೆಗೆ ಹಾರಿ ಪ್ರಾಣ ಕಳೆದು ಕೊಂಡಿದ್ದಾರೆ. ಬೆಳಗ್ಗೆ 11ರ ಸುಮಾರಿಗೆ ಘಟನೆ ಸಂಭವಿಸಿದೆ. ನರೋಡಾ ಪೋಲೀಸರು ಸ್ಥಳದ ಆಗಮಿಸಿ ತನಿಖೆ ನಡೆಸಿ, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಸದ್ಯ ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹವೇ ಆತ್ಯಹತ್ಯೆಗೆ ಕಾರಣ ಎಂದು ಶಂಕಿಸಲಾಯಿತು.
ಇದನ್ನೂ ಓದಿ :ನೀರಿನ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವು