ಕರ್ನಾಟಕ

karnataka

ETV Bharat / bharat

ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರಿನ ತಾಯಿ-ಮಗ ಸಾವು, ತಂದೆ-ಮಗಳ ಸ್ಥಿತಿ ಗಂಭೀರ - ಆಂಧ್ರಪ್ರದೇಶದಲ್ಲಿ ಬೆಂಗಳೂರಿನ ಕಾರು ಅಪಘಾತ

ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರಿನ ತಾಯಿ-ಮಗ ಸಾವನ್ನಪ್ಪಿದ್ದರೆ, ತಂದೆ-ಮಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

mother and baby dead in Chittor accident belongs to Bengaluru
ಆಂಧ್ರದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರಿನ ತಾಯಿ-ಮಗ ಸಾವು, ತಂದೆ-ಮಗಳಿಗೆ ಗಂಭೀರ ಗಾಯ

By

Published : Aug 14, 2022, 3:46 PM IST

ಚಿತ್ತೂರು (ಆಂಧ್ರಪ್ರದೇಶ): ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂವರು ವರ್ಷದ ಮಗ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ತಂದೆ ಮತ್ತು ಮಗಳು ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಲ್ಲಿನ ಗಂಗಾವರಂ ಸಮೀಪ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಗಾಯತ್ರಿ (30) ಮತ್ತು ಮಗ ವಿಥುನ್ (3) ಎಂದು ಗುರುತಿಸಲಾಗಿದೆ. ವೆಲ್ಲೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಾರು ಟೈರ್ ಪಂಕ್ಚರ್ ಆಗಿ ನಿಯಂತ್ರಣ ತಪ್ಪಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಗಾಯಾಳು ತಂದೆ ಮತ್ತು ಮಗಳನ್ನು ಪಲಮನೇರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ವಾಹನ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಸಾವು, ಮೃತದೇಹ ಕಂಡು ಮತ್ತೋರ್ವ ಬಲಿ

ABOUT THE AUTHOR

...view details