ಚೆನ್ನೈ(ತಮಿಳುನಾಡು):ಅಪ್ರಾಪ್ತ ಮಗಳನ್ನು ಬಲವಂತವಾಗಿ ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಒತ್ತಾಯ ಮಾಡಿರುವ ತಾಯಿಗೆ ಇದೀಗ ಮದ್ರಾಸ್ ಹೈಕೋರ್ಟ್ (Madras High Court) 10 ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿದೆ.
ಜೀವನೋಪಾಯಕ್ಕಾಗಿ ಹಣ ಸಂಪಾದನೆ ಮಾಡಲು ಹೆತ್ತ ತಾಯಿಯೇ ತನ್ನ ಅಪ್ರಾಪ್ತ ಮಗಳನ್ನು ಬಲವಂತವಾಗಿ ಲೈಂಗಿಕ ಕೆಲಸದಲ್ಲಿ ತೊಡಗುವಂತೆ ಪೀಡಿಸುತ್ತಿದ್ದಳು. ಈ ವೇಳೆ ಮಗಳು ಆಂಧ್ರಪ್ರದೇಶಕ್ಕೆ ಪರಾರಿಯಾಗಿದ್ದಾಳೆ. ಬಾಲಕಿಯ ರಕ್ಷಿಸಿದ ಆಂಧ್ರಪ್ರದೇಶ ಪೊಲೀಸರು ಮರಳಿ ಚೆನ್ನೈಗೆ ಕಳುಹಿಸಿದ್ದರು. ಈ ವೇಳೆ, ಚೆನ್ನೈ ಪೊಲೀಸರ ಮುಂದೆ ಬಾಲಕಿ ತನ್ನ ಸಂಕಷ್ಟ ಹೇಳಿಕೊಂಡಿದ್ದಳು. ಹೀಗಾಗಿ ಸಂತ್ರಸ್ತ ಬಾಲಕಿಯ ತಾಯಿ ಸೇರಿದಂತೆ 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.