ಚಿತ್ತೋರ್ಗಢ (ರಾಜಸ್ತಾನ):ತಾಯಿಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಹಾಕಿ ಕೊಂದು ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಚಿತ್ತೋರ್ಗಢ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಕೌಟುಂಬಿಕ ಕಲಹವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.
ಬುಧವಾರ ರಾತ್ರಿ ಈ ಕೃತ್ಯ ನಡೆದಿದ್ದು, ಪತಿ ಯಾವುದೋ ಕೆಲಸದ ನಿಮಿತ್ತ ಹೊರಹೋಗಿ ವಾಪಸ್ ಮನೆಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರು ಭೂರಾಲಾಲ್ ಬುಡಕಟ್ಟು ಜನಾಂಗಕ್ಕೆ ಸೇರಿದವರಾಗಿದ್ದಾರೆ.