ನೀಲಗಿರಿ(ತಮಿಳುನಾಡು): ಅಕ್ರಮ ಸಂಬಂಧ ಉಳಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೋರ್ವಳು ಜನ್ಮ ನೀಡಿರುವ ಮಗುವನ್ನೇ ಕೊಲೆಗೈದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಊಟಿ ಪೊಲೀಸರು 38 ವರ್ಷದ ಮಹಿಳೆಯನ್ನ ಬಂಧನ ಮಾಡಿದ್ದು, ವಿಚಾರಣೆ ನಡೆಸಿದಾಗ ವಿವಾಹೇತರ ಸಂಬಂಧ ಉಳಿಸಿಕೊಳ್ಳಲು ಮಗುವಿನ ಕೊಲೆ ಮಾಡಿರುವುದಾಗಿ ತಿಳಿಸಿದ್ದಾಳೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಕಳೆದ ಮಾರ್ಚ್ 14ರಂದು ಊಟಿ ಸರ್ಕಾರಿ ವೈದ್ಯಕೀಯ ಕಾಲೇಜ್ ಆಸ್ಪತ್ರೆಯಲ್ಲಿ ಮಗುವೊಂದು ಸಾವನ್ನಪ್ಪಿತ್ತು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಇದೆ ಎಂದು ತಾಯಿ ಹೇಳಿಕೆ ನೀಡಿದ್ದಳು. ಆದರೆ, ಅದರ ದೇಹದ ಮೇಲೆ ಯಾವುದೇ ರೀತಿಯ ಗಾಯಗಳಾಗಿರಲಿಲ್ಲ.