ಭೋಪಾಲ್(ಮಧ್ಯಪ್ರದೇಶ):ದೇಶದಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗಿದ್ದು, ಅದೇ ಕಾರಣಕ್ಕಾಗಿ ಅನೇಕ ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.
ಲಾಕ್ಡೌನ್ ಘೋಷಣೆ ಮಾಡಿರುವ ಕಾರಣ ಅಧಿಕಾರಿಗಳು ರಸ್ತೆಗಿಳಿದು, ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡುವಂತೆ ಜನರಿಗೆ ಸೂಚನೆ ನೀಡುತ್ತಿದ್ದಾರೆ. ಆದರೆ, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಹಣ್ಣು ಮಾರಾಟಗಾರನೊಬ್ಬ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾನೆ. ಮಧ್ಯಪ್ರದೇಶದ ಮುನ್ಸಿಪಲ್ ಅಧಿಕಾರಿ ರಾಜೇಂದ್ರ ಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ.