ಭೋಪಾಲ್: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಮಧ್ಯಪ್ರದೇಶ ಸರ್ಕಾರ ಉಚಿತ ಶಿಕ್ಷಣ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡಲಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
ಕೊರೊನಾ ಸಂದರ್ಭದಲ್ಲಿ ತಮ್ಮವರನ್ನು ಕಳೆದುಕೊಂಡ ಮಕ್ಕಳ ಭವಿಷ್ಯಕ್ಕೆ ಸಹಾಯಕವಾಗುವಂತೆ ಸರ್ಕಾರ ನೋಡಿಕೊಳ್ಳಲಿದೆ. ಅಷ್ಟೇ ಅಲ್ಲದೆ, ವ್ಯವಹಾರಗಳನ್ನು ಪ್ರಾರಂಭಿಸಲು ಬಡ್ಡಿ ರಹಿತ ಸಾಲ ಪಡೆಯುವವರಿಗೆ ರಾಜ್ಯ ಸರ್ಕಾರವು ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದ್ದಾರೆ.
"ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಿಗೆ ನಾವು ಶಿಕ್ಷಣವನ್ನು ಉಚಿತವಾಗಿ ನೀಡುತ್ತೇವೆ. ಅವರು ಅರ್ಹರಲ್ಲದಿದ್ದರೂ ಉಚಿತ ಪಡಿತರ ಮತ್ತು ತಿಂಗಳಿಗೆ 5,000 ರೂ. ಪಿಂಚಣಿ ನೀಡುತ್ತದೆ " ಎಂದು ಅವರು ಹೇಳಿದರು.
"ಇನ್ನು ವೃದ್ಧರಿಗೂ ನಮ್ಮ ಸರ್ಕಾರ ಸಹಾಯ ಮಾಡುತ್ತದೆ. ನಾವು ಅಂತಹ ವ್ಯಕ್ತಿಗಳನ್ನು ಮಾತ್ರ ಬಿಡಲು ಸಾಧ್ಯವಿಲ್ಲ. ಅವರು ಈಗ ಮಧ್ಯಪ್ರದೇಶ ಸರ್ಕಾರದ ಜವಾಬ್ದಾರಿಯಾಗಿದೆ" ಎಂದು ಹೇಳಿದರು.
ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ ಪೋಷಕರ ಮಕ್ಕಳು ಮತ್ತು ವಯಸ್ಸಾದ ಜನರಿಗೆ ಇಂತಹ ಯೋಜನೆಯನ್ನು ಪ್ರಾರಂಭಿಸಿದ ದೇಶದ ಮೊದಲ ರಾಜ್ಯ ಮಧ್ಯಪ್ರದೇಶ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.