ಭೋಪಾಲ್(ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ರಾಮನವಮಿ ಸಂದರ್ಭದಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಜಯ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಧಾರ್ಮಿಕ ವೈಷಮ್ಯ ಉಂಟಾಗುವ ರೀತಿಯಲ್ಲಿ ಟ್ವೀಟ್ ಮಾಡಿದ್ದಕ್ಕಾಗಿ ಅವರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಪ್ರಕರಣ ದಾಖಲು ಮಾಡಿದೆ.
ರಾಮನವಮಿ ಮೆರವಣಿಗೆ ಸಂದರ್ಭದಲ್ಲಿ ಖಾರ್ಗೋನ್ ಪ್ರದೇಶದಲ್ಲಿ ಹಿಂಸಾಚಾರ ನಡೆದಿದ್ದು, ಇದರ ಬೆನ್ನಲ್ಲೇ ಕೆಲ ಯುವಕರು ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸುತ್ತಿರುವ ವಿಡಿಯೋ ತುಣಕೊಂದನ್ನು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣ ಮತ್ತಷ್ಟು ವೈಷಮ್ಯ ಪಡೆದುಕೊಂಡಿತ್ತು. ಇದರಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ರಾಜ್ಯದಲ್ಲಿ ಗಲಭೆ ಉಂಟು ಮಾಡುವ ಉದ್ದೇಶದಿಂದ ಈ ರೀತಿಯ ಟ್ವೀಟ್ ಮಾಡಿದ್ದಾರೆಂದು ಅರೋಪ ಮಾಡಿದೆ.