ಮಧ್ಯಪ್ರದೇಶ (ಭೋಪಾಲ್): ಸಾಲಭಾದೆ ತಾಳದೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಭೋಪಾಲ್ನ ಮಿಶ್ರೋಡ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಲಾಕ್ಡೌನ್ ಆದ ಹಿನ್ನೆಲೆ ಸಿವಿಲ್ ಎಂಜಿನಿಯರ್ ಆಗಿದ್ದವರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ವಿಪರೀತ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಸಾಲ ತೀರಿಸಲಾಗದೆ, ದಂಪತಿ ವಿಷ ಸೇವನೆ, ಮಕ್ಕಳಿಬ್ಬರ ಕುತ್ತಿಗೆಯನ್ನು ಬ್ಲೇಡ್ನಿಂದ ಕುಯ್ದಿದ್ದಾರೆ. ಘಟನೆಯಲ್ಲಿ ತಂದೆ, ಮಗಳು ಮೃತಪಟ್ಟಿದ್ದು, ತಾಯಿ-ಮಗನ ಸ್ಥಿತಿ ಗಂಭೀರವಾಗಿದೆ. ಇವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.