ಕರ್ನಾಟಕ

karnataka

ETV Bharat / bharat

ಕೋವಿಡ್​ ವ್ಯಾಕ್ಸಿನ್​ ಪ್ರಯೋಗದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಸತ್ಯಾಂಶ ಬಹಿರಂಗ! - ಲಸಿಕೆ ಪ್ರಯೋಗದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವು

ಕೋವಿಡ್​ ವ್ಯಾಕ್ಸಿನ್​ ಪ್ರಯೋಗದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಮಾಹಿತಿ ಬಹಿರಂಗಗೊಂಡಿದ್ದು, ಇದೇ ವಿಚಾರವಾಗಿ ಮಧ್ಯಪ್ರದೇಶ ಆರೋಗ್ಯ ಸಚಿವರು ಸುದ್ದಿಗೋಷ್ಠಿ ನಡೆಸಿದರು.

Prabhu Ram Chaudhary
Prabhu Ram Chaudhary

By

Published : Jan 9, 2021, 7:57 PM IST

ಭೋಪಾಲ್​(ಮಧ್ಯಪ್ರದೇಶ):ಕೋವಿಡ್​ ವ್ಯಾಕ್ಸಿನ್ ಪ್ರಯೋಗದಲ್ಲಿ ಭಾಗಿಯಾಗಿದ್ದ ವ್ಯಕ್ತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಮಾಹಿತಿ ಬಹಿರಂಗಗೊಂಡಿದ್ದು, ಆತ ವಿಷ ಸೇವನೆಯಿಂದ ಸಾವನ್ನಪ್ಪಿದ್ದಾನೆ ಎಂದು ಮಧ್ಯಪ್ರದೇಶ ಆರೋಗ್ಯ ಸಚಿವ ಪ್ರಭು ರಾಮ್​ ಚೌಧರಿ ಸ್ಪಷ್ಟನೆ ನೀಡಿದ್ದಾರೆ.

ವ್ಯಾಕ್ಸಿನೇಷನ್ ನಂತರದ ಪರಿಣಾಮಗಳು ಲಸಿಕೆ ನೀಡಿದ 30 ನಿಮಷಿಗಳಲ್ಲಿ ಗೋಚರಿಸುತ್ತವೆ. ಆದರೆ, ಆ ವ್ಯಕ್ತಿಯಲ್ಲಿ 24ರಿಂದ 48 ಗಂಟೆಗಳ ನಡುವೆ ಯಾವುದೇ ಅಡ್ಡ ಪರಿಣಾಮ ಕಂಡು ಬಂದಿಲ್ಲ. ಜತೆಗೆ ಮರಣೋತ್ತರ ಪರೀಕ್ಷೆಯಲ್ಲಿ ಆತ ವಿಷ ಸೇವನೆಯಿಂದ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಬಹಿರಂಗಗೊಂಡಿದೆ ಎಂದು ಚೌಧರಿ ಸ್ಪಷ್ಟಪಡಿಸಿದ್ದಾರೆ.

ದೀಪಕ್ ಮರಾವಿ ಡಿಸೆಂಬರ್​ 12ರಂದು ಭೋಪಾಲ್​ನ ಪೀಪಲ್ಸ್ ಮೆಡಿಕಲ್ ಕಾಲೇಜ್​ನಲ್ಲಿ ನಡೆದ ಲಸಿಕೆ ಪ್ರಯೋಗದಲ್ಲಿ ಭಾಗಿಯಾಗಿದ್ದರು. ಇದಾದ 9 ದಿನಗಳ ನಂತರ ಅವರು ಮೃತಪಟ್ಟಿದ್ದಾರೆ. ಸಾವಿಗೆ ಕಾರಣ ಏನು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ABOUT THE AUTHOR

...view details