ಉಜ್ಜಯಿನಿ, ಮಧ್ಯಪ್ರದೇಶ:ಪಾಕಿಸ್ತಾನ ಜಿಂದಾಬಾದ್ ಮತ್ತು ಇತರ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಜ್ಜಯಿನಿ ಪೊಲೀಸ್ ವರಿಷ್ಠಾಧಿಕಾರಿ ಸತ್ಯೇಂದ್ರ ಶುಕ್ಲಾ ಹೇಳಿದ್ದಾರೆ.
ಉಜ್ಜಯಿನಿ ಗೀತಾ ಕಾಲೋನಿ ಪ್ರದೇಶದಲ್ಲಿ ಗುರುವಾರ ರಾತ್ರಿ ಮೊಹರಂ ಹಬ್ಬದ ವೇಳೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಮತ್ತು ಇತರ ಪ್ರಚೋದನಕಾರಿ ಘೋಷಣೆಗಳನ್ನು ಕೂಗಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಉಜ್ಜಯಿನಿ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳದಿಂದಾಗಿ ಸಾರ್ವಜನಿಕ ಸಭೆಗಳನ್ನು, ಮೆರವಣಿಗಗಳನ್ನು ರದ್ದು ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಈ ರೀತಿಯ ಘೋಷಣೆಗಳನ್ನು ಕೂಗಲಾಗಿದೆ ಎಂಬ ಆರೋಪವನ್ನು ಪೊಲೀಸ್ ವರಿಷ್ಠಾಧಿಕಾರಿ ತಳ್ಳಿಹಾಕಿದ್ದಾರೆ.
ಈ ಕುರಿತು ಭಾರತೀಯ ದಂಡ ಸಂಹಿತೆಯ ಐಪಿಸಿ ಸೆಕ್ಷನ್ 124 (ಎ) (ದೇಶದ್ರೋಹ), 153 (ಗಲಭೆಗೆ ಕಾರಣವಾಗುವ ಪ್ರಚೋದನೆ) ಮತ್ತು 188 (ಅಧಿಕಾರಿಯ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಜೀವಜಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಸಿಆರ್ಪಿಎಫ್ ಬಂಕರ್ ಮೇಲೆ ದಾಳಿಗೆ ಉಗ್ರರ ಯತ್ನ: ಅದೃಷ್ಟವಶಾತ್ ಸಿಡಿಯದ ಗ್ರೆನೇಡ್