ಕರ್ನಾಟಕ

karnataka

ETV Bharat / bharat

ಭೀಕರ ರಸ್ತೆ ಅಪಘಾತ: ಕಾರಿನಲ್ಲಿದ್ದ ಆರು ಮಂದಿ ಸಾವು - ಛಿಂದ್ವಾರಾದ ಬೆತುಲ್ ರಿಂಗ್ ಅಪಘಾತ

ನಾಗಪುರದಿಂದ ಉಮ್ರೆತ್‌ಗೆ ಬರುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿಯಾಗಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ.

MP: Six people died in chhindwara road accident
ಮಧ್ಯಪ್ರದೇಶ ಛಿಂದ್ವಾರಾದಲ್ಲಿ ಭೀಕರ ಅಪಘಾತ: ಕಾರಿನಲ್ಲಿದ್ದ ಆರು ಮಂದಿ ಸಾವು

By

Published : Sep 10, 2021, 8:08 AM IST

ಛಿಂದ್ವಾರಾ, ಮಧ್ಯಪ್ರದೇಶ: ಐಶರ್​ ಟ್ರಕ್ ಸ್ವಿಫ್​​ ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿ ಕಾರಿನಲ್ಲಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದ ಬೆತುಲ್ ರಿಂಗ್ ರೋಡ್​ನಲ್ಲಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಐದು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಎಸ್​ಪಿ ಸುದೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿದ್ದವರು ನಾಗಪುರದಿಂದ ಉಮ್ರೆತ್‌ಗೆ ಬರುತ್ತಿದ್ದರು. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ನಂತರ ಗಾಯಾಳುಗಳನ್ನು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿಸಲಾಗಿದೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಬಾರಾಬಂಕಿಯಲ್ಲಿ ದೂರು

ABOUT THE AUTHOR

...view details