ಭೋಪಾಲ್:ಡೆಡ್ಲಿ ವೈರಸ್ ಕೋವಿಡ್ನಿಂದಾಗಿ ನಿತ್ಯ ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಆಕ್ಸಿಜನ್, ಬೆಡ್ ಸಮಸ್ಯೆ ಉಂಟಾಗಿ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದಾರೆ.
ಇದರ ಮಧ್ಯೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳು ಸರಿಯಾದ ಸಮಯಕ್ಕೆ ವೈದ್ಯಕೀಯ ಸೇವೆ ಲಭ್ಯವಾಗದೇ ನರಳಾಟ ನಡೆಸುತ್ತಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಆರೋಗ್ಯ ಕಾರ್ಯಕರ್ತರು ಹಗಲು - ರಾತ್ರಿ ಲೆಕ್ಕಿಸದೇ ಕೆಲಸ ಮಾಡ್ತಿದ್ದು, ರೋಗಿಗಳ ಪ್ರಾಣ ಉಳಿಸಲು ಹೆಣಗಾಡುತ್ತಿದ್ದಾರೆ. ಆದರೆ ಮಧ್ಯಪ್ರದೇಶದ ಭೋಪಾಲ್ನ ಹಮೀಡಿಯಾದ ಗಾಂಧಿ ವೈದ್ಯಕೀಯ ಕಾಲೇಜ್ನಲ್ಲಿ ಇಬ್ಬರು ವೈದ್ಯರು ಕೊರೊನಾ ಸೋಂಕಿಗೊಳಗಾಗಿದ್ದರೂ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.