ರತ್ಲಾಮ್(ಮಧ್ಯಪ್ರದೇಶ):ಸರ್ಕಾರಿ ಆಸ್ಪತ್ರೆಗಳ ಎಡವಟ್ಟು ಪ್ರತಿದಿನ ಹೊರಬರುತ್ತಲೇ ಇರುತ್ತವೆ. ಸದ್ಯ ಅಂತಹದೊಂದು ಘಟನೆ ಮಧ್ಯಪ್ರದೇಶದ ರತ್ಲಾಮ್ನಲ್ಲಿ ಬೆಳಕಿಗೆ ಬಂದಿದೆ. ವೈದ್ಯರು ರಜೆ ತೆಗೆದುಕೊಂಡಿದ್ದರಿಂದ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿರುವ ಸಿಬ್ಬಂದಿ ಕೂಡ ಮನೆಗೆ ತೆರಳಿದ್ದರು. ಈ ವೇಳೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೋರ್ವಳು ಅಲ್ಲಿಗೆ ಆಗಮಿಸಿ, ಆಸ್ಪತ್ರೆಯ ಕಾಂಪೌಂಡ್ ಪಕ್ಕದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.
ಮಧ್ಯಪ್ರದೇಶದ ರತ್ಲಾಮ್ನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈದ್ಯರು ರಜೆ ತೆಗೆದುಕೊಂಡಿದ್ದರಿಂದ ಆರೋಗ್ಯ ಕೇಂದ್ರಕ್ಕೆ ಬೀಗ ಹಾಕಿರುವ ಸಿಬ್ಬಂದಿ ಮನೆಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಗರ್ಭಿಣಿಯೋರ್ವಳು ಅಲ್ಲಿಗೆ ಬಂದಿದ್ದು, ಮಗುವಿಗೆ ಜನ್ಮ ನೀಡಿದ್ದಾರೆ. ರತ್ಲಾಮ್ ಜಿಲ್ಲೆಯ ಬುಡಕಟ್ಟು ಪ್ರದೇಶದ ಕುಂದನ್‌ಪುರದ ಗರ್ಭಿಣಿ ಮಗುವಿಗೆ ಜನ್ಮ ನೀಡಿದ್ದಾರೆಂದು ತಿಳಿದು ಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.