ಗ್ವಾಲಿಯರ್ (ಮಧ್ಯಪ್ರದೇಶ): ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ. ಇದನ್ನು ವಿರೋಧಿಸಿದಾಗಲೆಲ್ಲ ತನ್ನ ಪರವಾನಗಿ ಪಡೆದ ರಿವಾಲ್ವರ್‌ನನ್ನು ಹಣೆಗೆ ಇಟ್ಟು ಬೆದರಿಸಲಾಗುತ್ತದೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿ ವಿರುದ್ಧ ಪೊಲೀಸರಿಗೆ ನೀಡಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
2000ರಲ್ಲಿ ನಮ್ಮ ಮದುವೆಯಾಗಿದ್ದು, ಇದಾದ ಕೆಲವೇ ತಿಂಗಳಿಂದಲೂ ಪತಿ ನನ್ನನ್ನು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತಪಡಿಸಲು ಶುರು ಮಾಡಿದ್ದರು. ಇದೀಗ ಕಳೆದ ಒಂದೂವರೆ ವರ್ಷದಿಂದ ಇದೇ ರೀತಿಯಾದ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ. ಇದನ್ನು ಪ್ರತಿಭಟಿಸಿದರೆ ರಿವಾಲ್ವರ್ ತೆಗೆದುಕೊಂಡು ಹಣೆಗೆ ಇಡುತ್ತಾರೆ. ಅಲ್ಲದೇ, ವರದಕ್ಷಿಣೆಗಾಗಿಯೂ ನನಗೆ ಹಿಂಸೆ ನೀಡುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.