ನೀಮುಚ್ (ಮಧ್ಯಪ್ರದೇಶ):30 ವರ್ಷದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನೀಮುಚ್ನಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಕಾನ್ಸ್ಟೇಬಲ್ ಸೆಪ್ಟೆಂಬರ್ 13ರಂದು ದೂರು ದಾಖಲು ಮಾಡಿದ್ದರು. ತನಿಖೆ ಆರಂಭಿಸಿದ್ದ ಪೊಲೀಸರು ಪ್ರಮುಖ ಆರೋಪಿಯ ತಾಯಿ ಸೇರಿದಂತೆ ಐವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದರು.
ಇದನ್ನೂ ಓದಿರಿ:ವಿಶ್ವಸಂಸ್ಥೆಯಲ್ಲಿ ಪಾಕ್ ಬೆವರು ಇಳಿಸಿದ ಸ್ನೇಹ ದುಬೆ.. IFS ಅಧಿಕಾರಿ ಮಾಹಿತಿಗೆ ಎಲ್ಲರೂ ಫಿದಾ!
ಆರೋಪಿಗಳು ಸಂತ್ರಸ್ತೆ ಜೊತೆ ಫೇಸ್ಬುಕ್ನಲ್ಲಿ ಪರಿಚಯವಾಗಿದ್ದಾರೆ. ಕಳೆದ ಏಪ್ರಿಲ್ ತಿಂಗಳಿಂದಲೂ ಆಕೆಯ ಜೊತೆ ವಾಟ್ಸ್ಆ್ಯಪ್ನಲ್ಲಿ ಚಾಟ್ ಮಾಡುತ್ತಿದ್ದರು. ಇದರ ಮಧ್ಯೆ ಆರೋಪಿಯ ಸಹೋದರನ ಹುಟ್ಟುಹಬ್ಬದ ಪಾರ್ಟಿಗೆ ಬರುವಂತೆ ಆಹ್ವಾನ ನೀಡಿದ್ದನು. ಅಲ್ಲಿಗೆ ಆಗಮಿಸಿರುವ ಆಕೆಯ ಮೇಲೆ ಮೂವರು ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ವಿಡಿಯೋ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ.
ಘಟನೆ ಬಗ್ಗೆ ದೂರು ನೀಡಿರುವ ಪೊಲೀಸ್ ಕಾನ್ಸ್ಟೇಬಲ್, ಈ ವೇಳೆ ಆರೋಪಿಯ ತಾಯಿ ಕೂಡ ತನಗೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಹಣ ವಸೂಲಿ ಮಾಡಲು ಯತ್ನಿಸಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನ ಮಾಡಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.