ನವದೆಹಲಿ: ಲೋಕಸಭೆಯಲ್ಲಿ ಬೆಲೆ ಏರಿಕೆ, ಜಿಎಸ್‌ಟಿ ಹೆರಿಕೆ ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದ 19 ಸಂಸದರು ವಾರಗಳ ಕಾಲ ಮಳೆಗಾಲದ ರಾಜ್ಯಸಭಾ ಕಲಾಪದ ಅಧಿವೇಶನದಿಂದ ಅಮಾನತುಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಸಭಾಪತಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕಲಾಪದೊಳಗೆ ಕೈಯಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದರಿಂದ ಕಲಾಪಕ್ಕೆ ಅಡ್ಡಿಯಾಗಿದೆ. ಹೀಗಾಗಿ, ಟಿಎಂಸಿ ಸಂಸದೆ ಸುಶ್ಮಿತಾ ದೇವ್,ಡಾ ಸಂತಾನು ಸೇನ್, ಡೋಲಾ ಸೇನ್ ಸೇರಿದಂತೆ 19 ರಾಜ್ಯಸಭಾ ಸಂಸದರು ಅಮಾನತುಗೊಂಡಿದ್ದಾರೆ. ಇದರ ಬೆನ್ನಲ್ಲೇ 20 ನಿಮಿಷಗಳ ಕಾಲ ಕಲಾಪ ಮುಂದೂಡಿಕೆ ಮಾಡಲಾಗಿದೆ.
ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಪ್ರತಿಪಕ್ಷಗಳು ಕಲಾಪಕ್ಕೆ ಅಡ್ಡಿ ಮಾಡ್ತಿದ್ದು, ಸರಾಗವಾಗಿ ಅಧಿವೇಶನ ನಡೆಯಲು ಬಿಡುತ್ತಿಲ್ಲ.ಹೀಗಾಗಿ, ಯಾವುದೇ ವಿಷಯದ ಬಗ್ಗೆ ಗಂಭೀರವಾದ ಚರ್ಚೆ ನಡೆದಿಲ್ಲ. ಇಂದು ಬೆಳಗ್ಗೆ 11 ಗಂಟೆಗೆ ಸದನ ಸಮಾವೇಶಗೊಂಡ ಬಳಿಕ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜುಲೈ 26 ಅನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ರಾಷ್ಟ್ರದ ವೀರ ಸೈನಿಕರಿಗೆ ದೇಶವು ಋಣಿಯಾಗಿದೆ ಎಂದು ಸ್ಮರಿಸಲಾಯಿತು.