ತಿರುಪತಿ:ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಶುಕ್ರವಾರ ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಅಲ್ಲಿ ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿ, ವಿಶೇಷ ಪೂಜೆ ಮಾಡಿದರು. ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಪತ್ನಿ ರಾಧಿಕಾ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶುಕ್ರವಾರ ಬೆಳಗ್ಗೆ ನಡೆದ ಅಭಿಷೇಕ ಹಾಗೂ ನಿಜಪಾದ ದರ್ಶನ ಸೇವೆಯಲ್ಲಿ ಅಂಬಾನಿ ಕುಟುಂಬ ಸಮೇತ ಪಾಲ್ಗೊಂಡಿದ್ದರು. ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ಕಾರ್ಯ ನಿರ್ವಹಣಾಧಿಕಾರಿ ಧರ್ಮಾ ರೆಡ್ಡಿ ಅವರು ಅಂಬಾನಿ ಅವರನ್ನು ಸ್ವಾಗತಿಸಿ,ದರ್ಶನದ ವ್ಯವಸ್ಥೆ ಮಾಡಿದರು.