ಬೆಂಗಳೂರು:ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ (Mulayam Singh Yadav passed away) ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಕಂಬನಿ ಮಿಡಿದಿದ್ದಾರೆ.
ನನ್ನ ಬಹುಕಾಲದ ಸ್ನೇಹಿತ ಮತ್ತು ಸಹೋದ್ಯೋಗಿ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಅವರ ಕುಟುಂಬ ಮತ್ತು ಅನುಯಾಯಿಗಳಿಗೆ ನಾನು ಸಾಂತ್ವನ ತಿಳಿಸುತ್ತೇನೆ. ಅವರು ಜಾತ್ಯತೀತ ಮತ್ತು ಸಮಾಜವಾದಿ ರಾಜಕೀಯ ಸಂಪ್ರದಾಯಗಳಿಗೆ ಬದ್ಧರಾಗಿದ್ದರು. ಅವರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರು ಇಂದು ಬೆಳಗ್ಗೆ 8.16 ಕ್ಕೆ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಹೆಚ್ಡಿಕೆ ಸಂತಾಪ: ಜನತಾ ಪರಿವಾರದ ಹಿರಿಯ ನಾಯಕ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ನಿಧನದಿಂದ ದುಃಖವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ. ಹೆಚ್.ಡಿ.ದೇವೇಗೌಡ ನೇತೃತ್ವದ ಯುನೈಟೆಡ್ ಫ್ರಂಟ್ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದರು. ಮುಲಾಯಂ ಅವರು ತಮ್ಮ ಸುದೀರ್ಘ ರಾಜಕೀಯ ಅವಧಿಯಲ್ಲಿ ಹಲವಾರು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದರು ಮತ್ತು ದೇಶಕ್ಕಾಗಿ ದಣಿವರಿಯದೆ ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ನಷ್ಟವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುವುದಾಗಿ ಟ್ವೀಟ್ ಮಾಡಿದ್ದಾರೆ
(ಓದಿ: ಜೀವನದ ಅಂತಿಮ ಕುಸ್ತಿಯಲ್ಲಿ ಸೋತ ನೇತಾಜಿ.. ಮುಲಾಯಂ ಸಿಂಗ್ ಇನ್ನಿಲ್ಲ...)