ಲಖನೌ(ಉತ್ತರ ಪ್ರದೇಶ):ಬಹು ಕಾಲದಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸಮಾಜವಾದಿ ಪಾರ್ಟಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಪತ್ನಿ ಸಾಧನಾ ಗುಪ್ತಾ ಇಂದು ನಿಧನರಾಗಿದ್ದಾರೆ. ಗುರ್ಗಾಂವ್ನ ಮೇದಾಂತ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಮುಲಾಯಂ ಸಿಂಗ್ ಯಾದವ್ ಅವರ ಎರಡನೇ ಪತ್ನಿ ಸಾಧನಾ ಗುಪ್ತಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದರು. ಕಳೆದ ಕೆಲ ದಿನಗಳ ಹಿಂದೆ ಅವರನ್ನ ಮೇದಾಂತ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸಾಧನಾ ಗುಪ್ತಾ ಮುಲಾಯಂ ಸಿಂಗ್ ಯಾದವ್ ಅವರಿಗಿಂತಲೂ ಸುಮಾರು 20 ವರ್ಷ ಚಿಕ್ಕವರಾಗಿದ್ದರು ಎಂಬುದು ಉಲ್ಲೇಖನೀಯ.
ಇದನ್ನೂ ಓದಿರಿ:ಶ್ರೀಲಂಕಾದಲ್ಲಿ ಭುಗಿಲೆದ್ದ ಪ್ರತಿಭಟನೆ: ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ.. ಗೋತಬಯ ರಾಜಪಕ್ಸ ಪರಾರಿ
ಸಾಧನಾ ಗುಪ್ತಾ ಹಾಗೂ ಮುಲಾಯಂ ಸಿಂಗ್ 1987ರಲ್ಲಿ ಮದುವೆ ಮಾಡಿಕೊಂಡಿದ್ದರು.ಇದಕ್ಕೂ ಮೊದಲು ಮುಲಾಯಂ ಸಿಂಗ್ ಯಾದವ್ 1986ರಲ್ಲಿ ಫರೂಖಾಬಾದ್ನ ಯುವತಿ ಜೊತೆ ಮದುವೆ ಮಾಡಿಕೊಂಡಿದ್ದರು. ಆದರೆ, ಒಂದು ವರ್ಷದಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ಇದಾದ ಬಳಿಕ ಎರಡನೇ ಮದುವೆ ಕಾರ್ಯಕ್ರಮ ನಡೆದಿತ್ತು. ಸಾಧನಾ ಗುಪ್ತಾ 1988 ರಲ್ಲಿ ಮುಲಾಯಂ ಜೀವನದಲ್ಲಿ ಬಂದರು ಮತ್ತು ಮುಲಾಯಂ 1989 ರಲ್ಲಿ ಮುಖ್ಯಮಂತ್ರಿಯಾದರು. ಅಂದಿನಿಂದ ಅವರು ಸಾಧನೆಯನ್ನು ಅದೃಷ್ಟ ಎಂದು ಪರಿಗಣಿಸಲು ಪ್ರಾರಂಭಿಸಿದರು.