ಲಖನೌ(ಉತ್ತರ ಪ್ರದೇಶ):ವಿಧಾನಸಭಾ ಚುನಾವಣೆ ಉತ್ತರ ಪ್ರದೇಶದಲ್ಲಿ ಸಾಕಷ್ಟು ಪಕ್ಷಾಂತರಗಳಿಗೆ ಕಾರಣವಾಗಿದೆ. ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಅಪರ್ಣಾ ಸಿಂಗ್ ಯಾದವ್ ಅವರು ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ. ಇವರು 2017ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ, ಬಿಜೆಪಿಯ ರೀಟಾ ಬಹುಗುಣ ಜೋಶಿ ಎದುರು ಸೋಲೊಪ್ಪಿಕೊಂಡಿದ್ದರು. ನಂತರದ ದಿನಗಳಲ್ಲಿ ಸಮಾಜವಾದಿ ಪಕ್ಷದಲ್ಲಿದ್ದರೂ ಎನ್ಡಿಎ ಸರ್ಕಾರದ ನೀತಿಗಳನ್ನು ಬೆಂಬಲಿಸುತ್ತಿದ್ದರು. ಈಗ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.