ಮುಂಬೈ(ಮಹಾರಾಷ್ಟ್ರ) :ಶಂಕಿತ ಶಿವಸೇನೆ ಕಾರ್ಯಕರ್ತರು ಶನಿವಾರ ತಡರಾತ್ರಿ ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಅವರ ವಾಹನದ ಮೇಲೆ ದಾಳಿ ನಡೆಸಿದ್ದು, ಅವರಿಗೂ ಗಾಯವಾಗಿದೆ. ಬಂಧಿತ ದಂಪತಿಗಳಾದ ನವನೀತ್ ರಾಣಾ ಮತ್ತು ಆಕೆಯ ಪತಿ ರವಿ ರಾಣಾ ಅವರನ್ನು ಭೇಟಿಯಾಗಲು ಸೋಮಯ್ಯ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಮೇಲೆ ದಾಳಿ - ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಮೇಲೆ ದಾಳಿ
ಶಂಕಿತ ಶಿವಸೇನೆ ಕಾರ್ಯಕರ್ತರು ಶನಿವಾರ ತಡರಾತ್ರಿ ಬಿಜೆಪಿಯ ಮಾಜಿ ಸಂಸದ ಕಿರೀಟ್ ಸೋಮಯ್ಯ ಅವರ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ..
ಬಿಜೆಪಿಯ ಮಾಜಿ ಸಂಸದ ಕಿರಿತ್ ಸೋಮಯ್ಯ ಮೇಲೆ ದಾಳಿ
ಪ್ರತಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್, ಆಶಿಶ್ ಶೆಲಾರ್ ಸೇರಿದಂತೆ ಬಿಜೆಪಿಯ ಪ್ರಮುಖರು ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ ಮತ್ತು ದಾಳಿಯಲ್ಲಿ ಭಾಗಿಯಾಗಿರುವ ಅಪರಾಧಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಗೃಹ ಸಚಿವ ದಿಲೀಪ್ ವಾಲ್ಸೆ-ಪಾಟೀಲ್ ಅವರಿಗೆ ಪತ್ರ ಬರೆದು ಮಾತನಾಡುವುದಾಗಿ ಸೋಮಯ್ಯ ಅವರು ಹೇಳಿದ್ದಾರೆ.