ಮುಂಬೈ(ಮಹಾರಾಷ್ಟ್ರ): ಒಬಿಸಿಯ ರಾಜಕೀಯ ಮೀಸಲಾತಿ ವಿಚಾರವಾಗಿ ಮೈತ್ರಿ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷವು ಇಂದು ರಾಜ್ಯಾದ್ಯಂತ ಆಂದೋಲನ ನಡೆಸಲಿದೆ.
ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜಯ್ ಕುಟೆ ಮತ್ತು ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಯೋಗೀಶ್ ತಿಲೇಕರ್ ಅವರು ಈ ಆಂದೋಲನದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಯೋಗೇಶ್ ತಿಲೇಕರ್ ಮಾತನಾಡಿ, ಕಳೆದ ಆರು ತಿಂಗಳಿನಿಂದ ಮೈತ್ರಿ ಸರ್ಕಾರವು ಒಬಿಸಿ ಸಮುದಾಯದ ರಾಜಕೀಯ ಮೀಸಲಾತಿಯನ್ನು ತಪ್ಪಿಸುತ್ತಿದೆ ಎಂದು ಹೇಳಿದರು.