ಕರ್ನಾಟಕ

karnataka

ETV Bharat / bharat

ಮುಂಬೈ ಅಗ್ನಿ ಅವಘಡದಲ್ಲಿ 7 ಮಂದಿ ಸಾವು: ಕೇಂದ್ರ, ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ

Mumbai building fire: ಮುಂಬೈನಲ್ಲಿ ಸಂಭವಿಸಿರುವ ಬೆಂಕಿ ಅವಘಡದಲ್ಲಿ ಮೃತಪಟ್ಟಿರುವ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ.

Mumbai building fire
Mumbai building fire

By

Published : Jan 22, 2022, 4:08 PM IST

ಮುಂಬೈ(ಮಹಾರಾಷ್ಟ್ರ):ದಕ್ಷಿಣ ಮುಂಬೈನ ಭಾಟಿಯಾ ಆಸ್ಪತ್ರೆ ಬಳಿ ಇರುವ 20 ಅಂತಸ್ತಿನ ಕಮಲಾ ಅಪಾರ್ಟ್‌ಮೆಂಟ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ದುರಂತ ಸಾವಿಗೀಡಾಗಿದ್ದಾರೆ. ಈ ವೇಳೆ 29ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಸ್ಥರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಪರಿಹಾರ ಘೋಷಿಸಲಾಗಿದೆ.

ಮುಂಬೈ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅನಾಹುತ

ಇಂದು ಬೆಳಗ್ಗೆ 7:30ರ ವೇಳೆ ಬಹುಮಹಡಿ ಕಟ್ಟಡದ 18ನೇ ಅಂತಸ್ತಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅವಘಡ ಸಂಭವಿಸಿದೆ. ಬೆಂಕಿ ಅನಾಹುತದಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಅಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ, ರಾಜ್ಯ ಸರ್ಕಾರದಿಂದ ಪರಿಹಾರ ಘೋಷಣೆ..ಬೆಂಕಿ ಅನಾಹುತದಲ್ಲಿ ಪ್ರಾಣ ಕಳೆದುಕೊಂಡಿರುವ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ(PMNRF)ಯಿಂದ ಪರಿಹಾರ ಘೋಷಣೆ ಮಾಡಲಾಗಿದ್ದು, ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಇದೇ ವೇಳೆ, ಮಹಾರಾಷ್ಟ್ರ ಸರ್ಕಾರ ಕೂಡ ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ನೀಡಲಾಗುವುದು ಎಂದು ಸಚಿವ ಆದಿತ್ಯ ಠಾಕ್ರೆ ತಿಳಿಸಿದ್ದಾರೆ. ಜೊತೆಗೆ ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ:ಮುಂಬೈನ 20 ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ: 7 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೂಡ ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಜೊತೆಗೆ ಸಂತ್ರಸ್ತ ಕುಟುಂಬಗಳಿಗೆ ನೆರವಾಗುವಂತೆ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details