ಮುಂಬೈ(ಮಹಾರಾಷ್ಟ್ರ): ರಾಜ್ಯದ ಆಡಳಿತಾತ್ಮಕ ಮುಖ್ಯ ಕಚೇರಿಗಳನ್ನು ಒಳಗೊಂಡ ಮುಂಬೈನ ಮಂತ್ರಾಲಯಕ್ಕೆ ಬಾಂಬ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶವೊಂದು ಬಂದಿದ್ದು, ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಮರೈನ್ ಡ್ರೈವ್ ಪೊಲೀಸರಿಗೆ ಇ-ಮೇಲ್ ಮೂಲಕ ಸಂದೇಶ ಬಂದಿದ್ದು, ಪೊಲೀಸ್ ಇನ್ಸ್ಪೆಕ್ಟರ್ ವಿಶ್ವನಾಥ್ ಕೊಲೆಕಾರ್ ಈ ಬಗ್ಗೆ ದೃಢಪಡಿಸಿದ್ದಾರೆ. ಈ ಬಗ್ಗೆ ತನಿಖೆ ಕೈಗೊಂಡಿದ್ದು ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿದುಬಂದಿದೆ.